Breaking NewsLatestಮೆಟ್ರೋರಾಜ್ಯಸುದ್ದಿ

ಯುಗಾದಿ ಹಬ್ಬಕ್ಕೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ KSRTC!

ಬೆಂಗಳೂರು: ಇನ್ನೇನು ಯುಗಾದಿ ಹಬ್ಬ ಹತ್ತಿರ ಬರುತ್ತಿದೆ. ಈಗಾಗಲೇ ಜನರು ಊರಿಗೆ ತೆರಳಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಸರ್ಕಾರ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಮತ್ತಷ್ಟು ಬಸ್ ಗಳನ್ನು ಕಲ್ಪಿಸಿಕೊಟ್ಟಿದ್ದಾರೆ. ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಸಾರಿಗೆ ಇಲಾಖೆ ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ. KRSTC ಮಹತ್ವದ ಕ್ರಮ ಕೈಗೊಂಡಿದ್ದು, ಸುಮಾರು 600 ಹೆಚ್ಚುವರಿ ವಿಶೇಷ ಬಸ್ಗಳ ವ್ಯವಸ್ಥೆ ಮಾಡಿದೆ. ಬೆಂಗಳೂರಿನಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಮಂಗಳೂರು, ಮೈಸೂರು, ಶಿವಮೊಗ್ಗ, ತಮಿಳುನಾಡು ಹಾಗೂ ಕೇರಳ ಕಡೆಗೆ ಹೆಚ್ವುವರಿ ಬಸ್ ವ್ಯವಸ್ಥೆ ಮಾಡಲಾಗಿದೆ. ಆನ್ಲೈನ್ ಮೂಲಕ ಮುಂಗಡ ಟಿಕೆಟ್ ಬುಕ್ಕಿಂಗ್ ಸೌಲಭ್ಯ ಕಲ್ಪಿಸಲಾಗಿದೆ.

02.04.2022ರಂದು ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 01.04.2022 ಹಾಗೂ 02.04.2022 ರಂದು ಬೆಂಗಳೂರಿನಿಂದ ರಾಜ್ಯದ ವಿವಿಧ ಸ್ಥಳಗಳಿಗೆ 600 ಹೆಚ್ಚುವರಿ ಬಸ್ ಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಾಪಸ್ಸಾಗಲು ದಿನಾಂಕ: 03.04.2022ರಂದು ವಿಶೇಷ ವಾಹನಗಳ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button