Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಗುಡ್ ನ್ಯೂಸ್: ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು

ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ.

ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.

ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ನೆರವಾಗಲು ನೇಕಾರ ಸಮ್ಮಾನ್ ಯೋಜನೆಯನ್ನು ಮುಖ್ಯಮಂತ್ರಿಗಳು 2020 -21ನೇ ಸಾಲಿನಿಂದ ಅನ್ವಯವಾಗುವಂತೆ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ಕೈಮಗ್ಗ ನೇಕಾರರಿಗೆ ಇದು ನೆರವಾಗಲಿದೆ ಎಂದು ಕೈಮಗ್ಗ ಮತ್ತು ಜವಳಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button