Breaking NewsLatestರಾಷ್ಟ್ರೀಯಸುದ್ದಿ

ಕುಂಕುಮವಿಟ್ಟುಕೊಂಡು ಶಾಲೆಗೆ ಬಂದಿದ್ದ ವಿದ್ಯಾರ್ಥಿನಿಯರಿಗೆ ಥಳಿತ: ಶಿಕ್ಷಕ ಸಸ್ಪೆಂಡ್

ಜಮ್ಮು ಮತ್ತು ಕಾಶ್ಮೀರ: ಹಣೆಗೆ ಸಿಂಧೂರ ಇಟ್ಟುಕೊಂಡು ಶಾಲೆಗೆ ಬಂದಿದ್ದ ಇಬ್ಬರು ವಿದ್ಯಾರ್ಥಿನಿಯರಿಗೆ ಶಾಲಾ ಶಿಕ್ಷಕ ಥಳಿಸಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆದಿತ್ತು.

ವಿದ್ಯಾರ್ಥಿನಿಯರಿಗೆ ಹೊಡೆದ ಶಿಕ್ಷಕನನ್ನು ನಿಸಾರ್ ಅಹಮದ್ ಎಂದು ಗುರುತಿಸಲಾಗಿದ್ದು ಜಿಲ್ಲಾಧಿಕಾರಿಗಳ ಆದೇಶದ ಮೇಲೆ ಶಿಕ್ಷಕನನ್ನು ಅಮಾನತು ಮಾಡಲಾಗಿದೆ.

ಪ್ರಾಥಮಿಕ ಶಾಲೆಯ ಖದುರಿಯನ್ ಪಂಚಾಯತ್ ಡ್ರಾಮ್ಮನ್ ನ ಇಬ್ಬರು ಯುವತಿಯರನ್ನು ಶಿಕ್ಷಕ ನಿಸಾರ್ ಅಹಮದ್ ಥಳಿಸಿದ್ದ ಕುರಿತಾಗಿ ಸೋಷಿಯಲ್ ಮೀಡಿಯಾದಲ್ಲಿ ವರದಿಯಾಗಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಮುಂದಿನ ಆದೇಶದವರೆಗೆ ನಿಸಾರ್ ಅಹಮದ್ ಅವರನ್ನು ಅಮಾನತುಗೊಳಿಸಲಾಗಿದೆ.

ಮಕ್ಕಳ ಆರೈಕೆ ಮತ್ತು ರಕ್ಷಣೆ ಕಾಯಿದೆ 2000ರ ಸೆಕ್ಷನ್ 23ರ ಪ್ರಕಾರ, ‘ಯಾರಾದರೂ ಮಕ್ಕಳ ಮೇಲೆ ಹಲ್ಲೆ ನಡೆಸಿದರೆ ಅವರು ಆರು ತಿಂಗಳವರೆಗೆ ಶಿಕ್ಷೆಗೆ ಗುರಿಯಾಗುವುದರ ಜೊತೆಗೆ ದಂಡವನ್ನು ಪಾವತಿಸಬೇಕಾಗುತ್ತದೆ.

Spread the love

Related Articles

Leave a Reply

Your email address will not be published. Required fields are marked *

Back to top button