Breaking NewsLatestಕ್ರೈಂಜಿಲ್ಲಾ ಸುದ್ದಿರಾಜ್ಯಶಿವಮೊಗ್ಗಸುದ್ದಿ

ಹರ್ಷ ಹತ್ಯೆ ಪ್ರಕರಣ: ವಿಧಾನ ಪರಿಷತ್ ಸದಸ್ಯ ಅರುಣ್​ಗೆ ಜೀವ ಬೆದರಿಕೆ ಕರೆ!

ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬಳಿಕ ಅನೇಕ ರೀತಿಯ ನಿಗೂಢ ಬೆಳವಣಿಗೆಗಳು ಆಗುತ್ತಿವೆ. ಹರ್ಷ ಹತ್ಯೆ ಪ್ರಕರಣದ ಸಂಬಂಧ ಹೇಳಿಕೆ ನೀಡಿದ್ದ ವಿಧಾನ ಪರಿಷತ್ ಸದಸ್ಯ ಡಿಎಸ್ ಅರುಣ್​ಗೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಹರ್ಷ ಹತ್ಯೆಗೆ ಸಂಬಂಧಿಸಿದಂತೆ ಅರುಣ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಫೆಬ್ರವರಿ 21ನೇ ತಾರೀಕು ಬೆದರಿಕೆ ಕರೆ ಬಂದಿದೆ. ಅಲ್ಲದೆ ಮುಸ್ತಾಕ್ ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಸಂದೇಶವನ್ನ ಪ್ರಕಟಿಸಿದ್ದಾನೆ. ಸತ್ತಿರೋದು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಅಷ್ಟೆ. ಮುಂದಿನ ದಿನಗಳಲ್ಲಿ ನಿಮ್ಮ ಪತ್ನಿ ಮಕ್ಕಳೇ ನಮ್ಮ ಟಾರ್ಗೆಟ್ ನೆನಪಿಡಿ ಷಂಡ ಸರ್ಕಾರದ ಭಂಡರಂತೆ ವರ್ತಿಸುವ ಪ್ರಚಂಡರೇ ಎಂದು ಪೋಸ್ಟ್ ಮಾಡಿದ್ದಾನೆ.

ಕೃತ್ಯ ಸಂಬಂಧ ಅರುಣ್ ಅವರ ಆಪ್ತ ಸಹಾಯಕ ವಾಗೀಶ್ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದು ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದಾರೆ. ಬೆದರಿಕೆ ಕುರಿತಂತೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕೇಸ್ ರಿಜಿಸ್ಟರ್ ಆಗಿದ್ದು ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button