Breaking NewsLatestರಾಜಕೀಯರಾಜ್ಯ
ಕಲಬುರಗಿ ಪಾಲಿಕೆ; ಖರ್ಗೆ ನನ್ನ ಬಳಿ ಮಾತನಾಡಿದ್ದಾರೆ: ದೇವೇಗೌಡ

ಬೆಂಗಳೂರು: ಕಲಬುರಗಿ ಪಾಲಿಕೆಯಲ್ಲಿ ಅಧಿಕಾರ ಹಿಡಿಯುವ ಸಂಬಂಧ ಮಲ್ಲಿಕಾರ್ಜುನ ಖರ್ಗೆ ನನ್ನ ಬಳಿ ಮಾತನಾಡಿದ್ದಾರೆ. ಕುಮಾರಸ್ವಾಮಿ ಹತ್ತಿರವೂ ಮಾತನಾಡಿದ್ದಾರೆ ಎಂದು ಜೆಡಿಎಸ್ ವಿರಿಷ್ಠ ಎಚ್ಡಿ ದೇವೇಗೌಡ ಹೇಳಿದ್ದಾರೆ.
ಜೆಪಿ ಭವನದಲ್ಲಿ ಅವರು ಮಾತನಾಡುತ್ತಿದ್ದರು. ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯದೇ ನಾವೇ ತೀರ್ಮಾನ ಮಾಡಬಾರದು ಎಂದು ಕುಮಾರಸ್ವಾಮಿಗೆ ಸೂಚಿಸಿದ್ದೇನೆ ಎಂದು ಅವರು ಹೇಳಿದರು.
ಬಿಜೆಪಿ ನಾಯಕರು ಯಾರೂ ನನ್ನ ಜೊತೆ ಮಾತನಾಡಿಲ್ಲ. ಖರ್ಗೆ ಅವರು ಪಕ್ಷದವರನ್ನೇ ಸಂಪರ್ಕಿಸಿ ಮಾತಾಡಿರಬೇಕು. ಸಿದ್ದರಾಮಯ್ಯ, ಡಿಕೆಶಿ, ಖರ್ಗೆ ಅವರು ಕೂತು ಮಾತನಾಡುತ್ತಾರೆ, ನೋಡೋಣ ಎಂದು ದೇವೇಗೌಡರು ಹೇಳಿದರು.
ಬಸವರಾಜ ಬೊಮ್ಮಾಯಿ ಅವರು ಕುಮಾರಸ್ವಾಮಿ ಜೊತೆ ಮಾತಾಡಿರಬಹುದು, ನನ್ನ ಜೊತೆ ಯಾರೂ ಮಾತನಾಡಿಲ್ಲ ಎಂದು ಮಾಜಿ ಪ್ರಧಾನ ಮಂತ್ರಿ ಮಾಧ್ಯಮದವರಿಗೆ ತಿಳಿಸಿದರು.
