Breaking NewsLatestಜಿಲ್ಲಾ ಸುದ್ದಿಬೆಂಗಳೂರುಮಂಡ್ಯಶಿವಮೊಗ್ಗ
ಕರ್ನಾಟಕದಲ್ಲಿಇಂದಿನಿಂದ 4 ದಿನಗಳ ಕಾಲ ಭಾರೀ ಮಳೆ

ಬೆಂಗಳೂರು: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ವರುಣನ ಆರ್ಭಟ ಜೋರಾಗಿದೆ.
ಬುಧವಾರ ಸಂಜೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ಮನೆಗಳಿಗೆ ನೀರು ನುಗ್ಗಿ, ರಸ್ತೆಯಲ್ಲಿ ಮಳೆ ನೀರು ನದಿಯಂತೆ ಹರಿದು ಅವಾಂತರ ಸೃಷ್ಟಿಯಾಗಿತ್ತು. ಇಂದಿನಿಂದ 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ರಾಜ್ಯದ ಹಲವು ಜಿಲ್ಲೆಗಳಿಗೆ ಇಂದು ಕೂಡ ಹಳದಿ ಎಚ್ಚರಿಕೆ ನೀಡಲಾಗಿದೆ.
ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಲಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು, ಚಿತ್ರದುರ್ಗ, ಶಿವಮೊಗ್ಗ, ತುಮಕೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಇಂದು (ಗುರುವಾರ) ಭಾರೀ ಮಳೆಯಾಗಲಿದೆ. 4 ದಿನಗಳ ಕಾಲ ಕರ್ನಾಟಕದಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದು, ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಿದೆ.
