Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯರಾಮನಗರಶಿವಮೊಗ್ಗಸುದ್ದಿ

ಕರ್ನಾಟಕದಲ್ಲಿ ಮಳೆಯ ಅಬ್ಬರ!

ಕರ್ನಾಟಕದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆಯಿಂದ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಕಳೆದ ವಾರದವರೆಗೆ ಕಡಿಮೆಯಾಗಿದ್ದ ಮಳೆಯ ಅಬ್ಬರ ಇದೀಗ ಮತ್ತೆ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ಇನ್ನೆರಡು ದಿನ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡು, ಉತ್ತರ ಒಳನಾಡು, ಕರಾವಳಿ, ಬೆಂಗಳೂರು ಭಾಗದಲ್ಲಿ ಇಂದಿನಿಂದ 2 ದಿನಗಳ ಕಾಲ ಮಳೆ ಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಇಂದು ವ್ಯಾಪಕ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 6ರವರೆಗೆ ಭಾರೀ ಮಳೆಯಾಗಲಿದೆ. ರಾಜ್ಯದ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಇಂದಿನಿಂದ 2 ದಿನ ಮಳೆ ಮುಂದುವರೆಯಲಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೊಡಗು, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button