Breaking NewsLatestಜಿಲ್ಲಾ ಸುದ್ದಿಬೆಂಗಳೂರುರಾಜ್ಯಸುದ್ದಿ

ಬೆಂಗಳೂರಿನ ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್​ ವರೆಗೆ ಭಾರೀ ವಾಹನಗಳ ಸಂಚಾರ ನಿಷೇಧ

ಬೆಂಗಳೂರು: ಬೆಂಗಳೂರಿನಿಂದ ಇತರ ಪ್ರದೇಶಗಳಲ್ಲಿ ತೆರಳಲು ಸಂಪರ್ಕ ಕೊಂಡಿಯಾಗಿರುವ ಹೆಬ್ಬಾಳ ರಸ್ತೆ ಜಂಕ್ಷನ್‌ನಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.

ಈ ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸ್ ಮಹತ್ವದ ನಿಯಮವೊಂದನ್ನು ಜಾರಿಗೆ ತಂದಿದೆ. ವಿಮಾನ ನಿಲ್ದಾಣ ಮತ್ತು ನಗರದ ನಡುವಿನ ಪ್ರಯಾಣವನ್ನು ಸುಲಭಗೊಳಿಸಲು ಸಾದಹಳ್ಳಿ ಜಂಕ್ಷನ್​ನಿಂದ ಹೆಬ್ಬಾಳ ಫ್ಲೈಓವರ್ ವರೆಗೆ ಪೀಕ್ ಅವರ್​ನಲ್ಲಿ ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ.

ಬೆಂಗಳೂರು ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಅವರು ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದು, ಈ ಆದೇಶದ ಪ್ರಕಾರ ಪ್ರತಿದಿನ ಬೆಳಗ್ಗೆ 8.30 ರಿಂದ ಬೆಳಗ್ಗೆ 10.30ರ ವರೆಗೆ (ಎರಡು ಗಂಟೆ) ಭಾರೀ (ಸರಕು ಸಾರಿಗೆ) ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ನಿಯಮ 18/11/2022ರಿಂದ ಒಂದು ತಿಂಗಳ ವರೆಗೆ ಜಾರಿಯಲ್ಲಿರುತ್ತದೆ.

ಬೆಂಗಳೂರು ನಗರದ ರಾಷ್ಟ್ರೀಯ ಹೆದ್ದಾರಿ-7ನಲ್ಲಿ ಪ್ರತಿದಿನ ಲಕ್ಷಾಂತರ ಸರಕು ಸಾರಿಗೆ ವಾನಗಳು ಸಂಚರಿಸುತ್ತಿದ್ದು, ಇದರಿಂದಾಗಿ ದೈನಂದಿನ ಪೀಕ್ ಅವರ್​ನಲ್ಲಿ ಸಂಚಾರದಲ್ಲಿ ವ್ಯತ್ಯಯವಾಗುತ್ತಿದೆ. ಇದನ್ನು ಗಮನಿಸಿ ಈ ಕ್ರಮಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಸಂಚಾರ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಆದೇಶದಲ್ಲಿ ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button