ಭ್ರಷ್ಟಾಚಾರ ಕೇಸ್; ಬಿಎಸ್ವೈ, ಪುತ್ರ ವಿಜಯೇಂದ್ರ ಖುದ್ದು ಹಾಜರಾತಿಗೆ ಹೈಕೋರ್ಟ್ ಸಮನ್ಸ್

ಬೆಂಗಳೂರು: ಭ್ರಷ್ಟಾಚಾರ ಆರೋಪ ಕೇಸ್ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಪುತ್ರ ವಿಜಯೆಂದ್ರ ಖುದ್ದು ಹಾಜರಾತಿಗೆ ಹೈಕೋರ್ಟ್ ಸೂಚಿಸಿದೆ.
ಯಡಿಯೂರಪ್ಪ ಮತ್ತು ಕುಟುಂಬದವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಸ್ ತನಿಖೆಗೆ ಕೋರಿ ಟಿಜೆ ಅಬ್ರಹಾಂ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಪ್ರಕರಣವನ್ನು ಸಿಬಿಐ ಅಥವಾ ಎಸ್ಐಟಿ ತನಿಖೆಗೆ ವಹಿಸಬೇಕೆಂದು ಕೋರಿದ್ದ ಪಿಐಎಲ್ನ್ನು ಐದು ದಿನಗಳ ಹಿಂದೆ ಹೈಕೋರ್ಟ್ ವಿಚಾರಣೆಗೆ ಕೈಗೆತ್ತಿಕೊಂಡಿತ್ತು. ಪಿಐಎಲ್ ಎಂದು ಪರಿಗಣಿಸಲು ನಿರಾಕರಿಸಿದ್ದ ಹೈಕೋರ್ಟ್, ಅರ್ಜಿಯನ್ನು ಮಾರ್ಪಡಿಸಿ ಸಂಬಂಧಿಸಿದ ಪೀಠಕ್ಕೆ ವರ್ಗಾಯಿಸಲು ರಿಜಿಸ್ಟ್ರಾರ್ ಜನರಲ್ರಿಗೆ ಸೂಚನೆ ನೀಡಿತ್ತು.
ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಪೂರ್ವಾನುಮತಿ ಸಿಗದಿದ್ದುದರಿಂದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶಿಸಲು ನಿರಾಕರಿಸಿತ್ತು. ಅನಂತರ ಟಿ.ಜೆ.ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ವಿಚಾರಣೆ ನಡೆಸಿರುವ ಹೈಕೋರ್ಟ್, ಆಗಸ್ಟ್ 17ರಂದು ಬಿಎಸ್ವೈ ಮತ್ತು ಪುತ್ರ ವಿಜಯೇಂದ್ರ ವಿಚಾರಣೆಗೆ ಖುದ್ದು ಹಾಜರಾಗಲು ಸೂಚನೆ ನೀಡಿದೆ.
