Breaking NewsLatestಮೆಟ್ರೋರಾಜ್ಯಸುದ್ದಿ
ಹಿಜಾಬ್ ವಿವಾದ : ವಿಸ್ತ್ರತ ಪೀಠಕ್ಕೆ ವಿಚಾರಣೆಗೆ ವರ್ಗಾಯಿಸಿದ ನ್ಯಾಯಮೂರ್ತಿ

ಬೆಂಗಳೂರು : ರಾಜ್ಯದಲ್ಲಿ ತೀವ್ರ ಕೋಮು ಸಂಘರ್ಷ ಸೃಷ್ಠಿಸಿದ್ದ ಹಿಜಾಬ್-ಕೇಸರಿ ಶಾಲು ಪ್ರಕರಣವನ್ನ ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾವಣೆ ಮಾಡಲಾಗಿದೆ. ಇಂದಿನ ವಾದ ವಿವಾದದ ಬಳಿಕ ವಿಸ್ತ್ರತ ಪೀಠಕ್ಕೆ ವರ್ಗಾಯಿಸಿ ಆದೇಶ ನೀಡಿದೆ.
ವಿಸ್ತೃತ ಪೀಠ ರಚಿಸುವ ಬಗ್ಗೆ ಹೈಕೋರ್ಟ್ ಸಿಜೆ ತೀರ್ಮಾನಿಸಲಿ. ಈ ಪ್ರಕರಣ ವಿಸ್ತೃತ ಪೀಠದಲ್ಲಿ ವಿಚಾರಣೆಗೆ ಯೋಗ್ಯವಾಗಿದೆ. ಈ ಬಗ್ಗೆ ಹೈಕೋರ್ಟ್ ಸಿಜೆ ವಿವೇಚನಾಧಿಕಾರ ಹೊಂದಿದ್ದಾರೆ. ತಕ್ಷಣವೇ ಸಂಪೂರ್ಣ ಕಡತ ಮುಖ್ಯ ನ್ಯಾಯಮೂರ್ತಿಗಳಿಗೆ ಕಳುಹಿಸಿ ಎಂದು ಹೈಕೋರ್ಟ್ ರಿಜಿಸ್ಟ್ರಾರ್ಗೆ ನ್ಯಾಯಮೂರ್ತಿಗಳ ನಿರ್ದೇಶನ ನೀಡಿದ್ದಾರೆ.
ಅರ್ಜಿದಾರರು ಮುಂದಿನ ವಿಚಾರಣೆ ವೇಳೆ ಮನವಿ ಸಲ್ಲಿಸಬಹುದು. ಮಧ್ಯಂತರ ಆದೇಶದ ಬಗ್ಗೆ ಮನವಿ ಸಲ್ಲಿಸಬಹುದು ಎಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಸೂಚನೆ ನೀಡಿದ್ದಾರೆ.

One Comment