Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯಸುದ್ದಿ
ಹಿಜಾಬ್-ಕೇಸರಿ ಶಾಲು ವಿವಾದ: ಬುಧವಾರ ಮಹತ್ವದ ಸಂಪುಟ ಸಭೆ

ಬೆಂಗಳೂರು: ಹಿಜಾಬ್-ಕೇಸರಿ ಶಾಲು ವಿವಾದ ರಾಜ್ಯದೆಲ್ಲೆಡೆ ಕಾಡ್ಗಿಚ್ಚಿನಂತೆ ಹಬ್ಬ ದೇಶ-ವಿದೇಶಗಳ ಗಮನ ಸೆಳೆದಿರುವ ಬೆನ್ನಲ್ಲೇ ಬುಧವಾರ ರಾಜ್ಯ ಸಚಿವ ಸಂಪುಟದ ಮಹತ್ವದ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಬೆಳಗ್ಗೆ 11ಕ್ಕೆ ಈ ಸಭೆ ನಿಗದಿಯಾಗಿದೆ. ಸಭೆಯಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದಿಂದ ಉದ್ಭವಿಸಿರುವ ಪರಿಸ್ಥಿತಿ ಕುರಿತು ವಿಸ್ತೃತ ಚರ್ಚೆ ನಡೆಯುವ ಸಾಧ್ಯತೆ ಇದೆ.
ವಿವಾದದ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ ಎಂದು ಪ್ರಾಥಮಿಕ ಮತ್ತು ಪೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಪ್ರಕರಣ ಹೈಕೋರ್ಟ್ ನಲ್ಲಿ ವಿಚಾರಣಾ ಹಂತದಲ್ಲಿದ್ದು, ಅದರ ತೀರ್ಮಾನ ಹಾಗೂ ಕಿಡಿಗೇಡಿಗಳು ವಿವಾದವನ್ನು ದುರುಪಯೋಗಪಡಿಸಿಕೊಳ್ಳುತ್ತಿರುವ ವಿಚಾರ ಕುರಿತು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.
