ನಿಷೇಧಾಜ್ಞೆ ನಡುವೆ ಕಾಲೇಜುಗಳಲ್ಲಿ ಹಿಜಾಬ್ ಮಾರ್ದನಿ, ಪ್ರತಿರೋಧ, ಪ್ರತಿಭಟನೆ, ಪರೀಕ್ಷೆಗೆ ಗೈರು..

HIJAB KARNATAKA OVERALL: ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮೂರು ದಿನಗಳ ರಜೆ ಘೋಷಣೆ ನಂತರ ರಾಜ್ಯಾದ್ಯಂತ ಬುಧವಾರದಿಂದ ಕಾಲೇಜುಗಳ ಪುನರ್ ಆರಂಭವಾಗಿವೆ. ಕೆಲವು ಜಿಲ್ಲೆಗಳಲ್ಲಿ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೈಸೂರು,ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಕಲಬುರಗಿ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರಕನ್ನಡ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾಲೇಜು ಮತ್ತು ಪ್ರೌಢಶಾಲೆಗಳ ಸುತ್ತಮುತ್ತಾ ಮುಂಜಾಗ್ರತ ಕ್ರಮವಾಗಿ ತೀವ್ರ ನಿವಾ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.
ಕಾನೂನಿಗಿಂತ ದೊಡ್ಡವರು ಯಾರು ಇಲ್ಲ: ಅರಗ ಜ್ಞಾನೇಂದ್ರ
ಈ ನಡುವೆ ಹೇಳಿಕೆ ನೀಡಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತೇವೆ ಎಂದು ಪಟ್ಟು ಹಿಡಿಯುವಂತಿಲ್ಲ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ಕೋರ್ಟ್ ಆದೇಶಕ್ಕೆ ಎಲ್ಲರೂ ತಲೆಬಾಗಬೇಕು. ಕೋರ್ಟ್ ಆದೇಶಕ್ಕೆ ಮಾನ್ಯತೆ ನೀಡದಿದ್ದರೆ ಈ ದೇಶದ ಪ್ರಜೆಗಳಲ್ಲ ಎಂದಾಗುತ್ತದೆ ಎಂದಿದ್ದಾರೆ.
ಶಾಲೆ ಆವರಣದಲ್ಲಿ ಪ್ರತಿಭಟನೆ ಮಾಡಲು ಯಾರಿಗೂ ಅವಕಾಶ ಇಲ್ಲ. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಬೇಕು. ಕೆಲವು ಕಾಲೇಜುಗಳಲ್ಲಿ ನಿಯಮ ಉಲ್ಲಂಘನೆ ಗಮನಕ್ಕೆ ಬಂದಿದೆ. ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಕಾಲೇಜುಗಳು ಮತ್ತು ಪೊಲೀಸರಿಗೆ ಸೂಚಿಸಲಾಗಿದೆ ಎಂದಿದ್ದಾರೆ.
ಮಲ್ಲೇಶ್ವರಂ ಕಾಲೇಜಿನಲ್ಲಿ ಕಾಂಗ್ರೆಸ್ ವಾಗ್ವಾದ
ಬೆಂಗಳೂರಿನ ಮಲ್ಲೇಶ್ವರಂ ಮಹಿಳಾ ಕಾಲೇಜಿನಲ್ಲಿ ಹಿಜಾಬ್ ಇಲ್ಲದೇ ತರಗತಿಗೆ ಬರಲು ವಿರೋಧ ವ್ಯಕ್ತವಾಗಿದೆ. ಹಿಜಾಬ್ ತೆರವಿಗೆ ಮುಂದಾದ ಕಾಲೇಜಿನ ಪ್ರಾಂಶುಪಾಲರ ಜತೆ ಕಾಂಗ್ರೆಸ್ ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ. ಹಿಜಾಬ್ ತೆಗೆಯದೇ ತರಗತಿ ಪ್ರವೇಶಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ಎನ್ನಲಾದ ಕೆಲವರು ವಿದ್ಯಾರ್ಥಿನಿಯರನ್ನು ಹುರಿದುಂಬಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಮಧ್ಯಪ್ರವೇಶಿಸಿದ ಪೊಲೀಸರು ನಿಷೇಧಾಜ್ಞೆಯ ಕಾರಣ ನೀಡಿ ಸ್ಥಳದಿಂದ ಚದುರಿಸಿದ್ದಾರೆ.
ಅಚ್ಚರಿ ಮೂಡಿಸಿದ ಮಹಾರಾಣಿ ಕಾಲೇಜು ಪ್ರಾಂಶುಪಾಲರು
ಇದೆಲ್ಲದರ ನಡುವೆ, ಬೆಂಗಳೂರಿನ ಮಹಾರಾಣಿ ಕಾಲೇಜಿನ ಪ್ರಾಂಶುಪಾಲ ಪ್ರಕಾಶ್, ನಮಗ ಸಮವಸ್ತ್ರ ಕಡ್ಡಾಯವಿಲ್ಲ. ವಿದ್ಯಾರ್ಥಿನಿಯರು ಯಾವ ಬಟ್ಟೆಯನ್ನಾದರೂ ಧರಿಸಿ ಕಾಲೇಜಿಗೆ ಬರಬಹುದು ಯಾವುದು ಹೇಳಿಕೆ ಅಚ್ಚರಿ ಮೂಡಿದ್ದಾರೆ. ಸಮವಸ್ತ್ರ ಇಲ್ಲದ ಕಾರಣ ಯಾವುದೇ ನಿಯಮ ನಮಗೆ ಅನ್ವಯಿಸುವುದಿಲ್ಲ ಎಂಬುದು ಅವರು ನೀಡುವ ಸಮರ್ಥನೆ.
ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ
ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಸಮವಸ್ತ್ರದ ವೇಲ್ ಅನ್ನು ತಲೆಗೆ ಧರಿಸಿ ಶಾಲೆಗೆ ತೆರಳಿದ್ದರು. ಆದರೆ ಹೈಕೋರ್ಟ್ ಆದೇಶ ಉಲ್ಲಂಘಿಸಿ ಶಾಲಾ ಶಿಕ್ಷಕರು ಅನುಮತಿ ನೀಡಿಲ್ಲ. ಇದು ವಿದ್ಯಾರ್ಥಿಗಳ ಪೋಷಕರು ಹಾಗೂ ಶಿಕ್ಷಕರ ಮಧ್ಯೆ ಮಾತಿನ ಚಕಮಕಿಗೆ ಕಾರಣವಾಗಿದೆ ಪ್ರವೇಶ ನಿರಾಕರಿಸಿದ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯದೇ ಹಿಜಾಬ್ ಧರಿಸಿದ್ದ ವಿದ್ಯಾರ್ಥಿಗಳು ಶಾಲೆಯಿಂದ ಹೊರಬಂದು ಪ್ರತಿಭಟನೆ ನಡೆಸಿದ್ದಾರೆ.
ಮೌಂಟೇನ್ ವ್ಯೂ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ವೇಳೆ ಆಡಳಿತ ಮಂಡಳಿ-ವಿಧ್ಯಾರ್ಥಿಗಳ ಜೊತೆ ಮಾತಿನ ಚಕಮಕಿ ನಡೆದಿದ್ದು, ತರಗತಿ ಬೇಡ, ಕ್ಯಾಂಪಸ್ ಒಳಗೆ ಬಿಡುವಂತೆ ಆಗ್ರಹಿಸಿದ್ದಾರೆ. ಕ್ಯಾಂಪಸ್ ಗೆ ಬಿಡಲು ಆಡಳಿತ ಮಂಡಳಿ ನಕಾರ ವ್ಯಕ್ತಪಡಿಸಿದೆ. ಹೀಗಾಗಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ. ಹೀಗಾಗಿ 30ಕ್ಕೂಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾಲೇಜಿನಿಂದ ಹೊರಕ್ಕೆ ಹಾಕಲಾಗಿದೆ.
ಪರೀಕ್ಷೆಗಿಂತ ಹಿಜಾಬ್ ಮುಖ್ಯ
ಬಳ್ಳಾರಿಯ ಸರಳದೇವಿ ಕಾಲೇಜಿನಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಒಪ್ಪದೇ ಇಂಟರ್ ನೆಲ್ ಪರೀಕ್ಷೆಯನ್ನು ಬಿಟ್ಟು ಹೊರ ಬಂದಿದ್ದಾರೆ. ನಮಗೆ ನಮ್ಮ ಧರ್ಮದ ಪಾಲನೆ ಮುಖ್ಯ ಎಂದು ವಿದ್ಯಾರ್ಥಿನಿಯೊಬ್ಬರು ಪ್ರತಿಕ್ರಿಯಿಸಿದರು.
ತುಮಕೂರಿನಲ್ಲಿ ಕಾನೂನು ಕ್ರಮದ ಎಚ್ಚರಿಕೆ
ತುಮಕೂರು ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳೀಗೆ ಮಾತ್ರ ಕಾಲೇಜು ಆವರಣ ಪ್ರವೇಶಿಸಲು ಅವಕಾಶ ನೀಡಲಾಗಿದೆ. ನಿಷೇಧಾಜ್ಞೆ ಅನ್ವಯ ಯಾವುದೇ ಮಾರಕಾಸ್ತ್ರಗಳು ಹಾಗೂ ಸ್ಫೋಟಕ ವಸ್ತುಗಳನ್ನ ಹಿಡಿದು ಓಡಾಡುವಂತಿಲ್ಲ. ಯಾವುದೇ ಸಭೆ, ಬಹಿರಂಗ ಪ್ರಚಾರ ನಡೆಸುವಂತಿಲ್ಲ. ಯಾವುದೇ ಅಹಿತಕರ ಘಟನೆಗಳು ನಡೆಸುವಂತಿಲ್ಲ. ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ತಿಳಿಸಿದ್ಧಾರೆ.
ಬಾಗಲಕೋಟೆಯಲ್ಲೂ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧ
ಬಾಗಲಕೋಟೆಯಲ್ಲಿ ಪೋಷಕರು, ಅನ್ಯ ವ್ಯಕ್ತಿಗಳಿಗೆ ಕಾಲೇಜು ಆವರಣದಲ್ಲಿ ಪ್ರವೇಶ ಇಲ್ಲ ಎಂದು ಸೂಚಿಸಲಾಗಿದೆ. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಕೊಡಗಿನಲ್ಲಿ ಮನವೊಲಿಸಲು ಸೂಚನೆ
ಕೊಡಗಿನಲ್ಲಿ ಜಿಲ್ಲಾಧಿಕಾರಿ, ಸತೀಶ್, ಧಾರ್ಮಿಕ ಸಂಕೇತದ ವಸ್ತ್ರಗಳನ್ನು ಧರಿಸಿ ತರಗತಿಯಲ್ಲಿ ಕೂರಲು ಅವಕಾಶ ನೀಡಬಾರದು, ಧರಿಸಿ ಬರುವವರ ಮನವೊಲಿಸಿ. ವಿದ್ಯಾರ್ಥಿಗಳ ಮೇಲೆ ಬಲ ಪ್ರಯೋಗ ಮಾಡಬಾರದು ಎಂದು ಶಿಕ್ಷಣ ಸಂಸ್ಥೆಗಳಿಗೆ ಆದೇಶಿಸಿದ್ದಾರೆ.
ದಾವಣಗೆರೆಯಲ್ಲಿ ಗೇಟು ಹೊರಗೆ ನಿಂತ ವಿದ್ಯಾರ್ಥಿನಿ
ದಾವಣಗೆರೆಯ ಹರಿಹರದ ಸರ್ಕಾರಿ ಪಿಯು ಕಾಲೇಜಿನ ಗೇಟ್ ಬಳಿ ವಿದ್ಯಾರ್ಥಿನಿಯೊಬ್ಬರು ಕಾಲೇಜಿಗೂ ಹೋಗದೇ ಮನೆಗೂ ವಾಪಸ್ಸಾಗದೇ ಗೇಟ್ ಬಳಿಯೇ ಗಂಟೆಗೂ ಹೆಚ್ಚು ಕಾಲ ಕಾದು ನಿಂತಿದ್ದುದು ಮನಕಲಕುವಂತಿತ್ತು. ವಿಷಯ ತಿಳಿದು ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಮಮತಾ ಹಿರೇಗೌಡರ್ ವಿದ್ಯಾರ್ಥಿನಿಗೆ ಮನವೊಲಿಸುವ ವಿಫಲಯತ್ನ ನಡೆಸಿದರು. ವಿದ್ಯಾರ್ಥಿನಿ ಹಿಜಾಬ್ ತೆಗೆಯದೇ ಸ್ಥಳದಿಂದ ಕದಲಿರಲಿಲ್ಲ.
ವಿಜಯಪುರದಲ್ಲಿ ಪೋಷಕರ ಆಕ್ರೋಶ
ವಿಜಯಪುರ ಪಿಯು ಮತ್ತು ಪದವಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ತರಗತಿ ಪ್ರವೇಶಿಸಲು ಅವಕಾಶ ನೀಡದ ಕಾರಣ, ತರಗತಿ ಹೊರಗೆ ವಿದ್ಯಾರ್ಥಿನಿಯರು ಪ್ರತಿಟಿಸಿದರು. ಮಕ್ಕಳನ್ನು ತರಗತಿಯಿಂದ ಹೊರಕಳಿಸಿದ್ದು ತಪ್ಪು ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿ ವಿದ್ಯಾರ್ಥಿನಿಯರ ಬೆಂಬಲಕ್ಕೆ ನಿಂತು ಸರ್ಕಾರದ ಕ್ರಮವನ್ನು ಖಂಡಿಸಿದರು. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯರು ಘೋಷಣೆ ಕೂಗಿದರು.
ಉತ್ತರ ಕನ್ನಡದಲ್ಲಿ ಕಾಲೇಜಿಂದ ಹೊರಬಂದ ವಿದ್ಯಾರ್ಥಿನಿಯರು
ಉತ್ತರಕನ್ನಡ ಜಿಲ್ಲೆ ಶಿರಸಿಯ ಎಂಇಎಸ್ ಕಾಲೇಜಿಗೆ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರನ್ನು ತಡೆಯಲಾಗಿದೆ. 3 ವಿದ್ಯಾರ್ಥಿನಿಯರು ಹಿಜಾಬ್ ತೆಗೆಯಲು ಒಪ್ಪಿದ್ದಾರೆ. ಉಳಿದ 15 ವಿದ್ಯಾರ್ಥಿನಿಯರು ಒಪ್ಪದೇ ಹೊರಗೆ ಬಂದಿದ್ದಾರೆ. ಯಾದಗಿರಿಯ ನ್ಯೂ ಕನ್ನಡ ಖಾಸಗಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ಧಾರಣೆಗೆ ಒಪ್ಪದೆ ತರಗತಿಯಿಂದ ಹೊರ ಬಂದ 30 ವಿದ್ಯಾರ್ಥಿನಿಯರು ಮನೆಯತ್ತ ಹೆಜ್ಜೆ ಹಾಕಿದರು.
ಬೆಂಗಳೂರು: ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮೂರು ದಿನಗಳ ರಜೆ ಘೋಷಣೆ ನಂತರ ರಾಜ್ಯಾದ್ಯಂತ ಬುಧವಾರದಿಂದ ಕಾಲೇಜುಗಳ ಪುನರ್ ಆರಂಭವಾಗಿವೆ. ಕೆಲವು ಜಿಲ್ಲೆಗಳಲ್ಲಿ ಮುಂಜಾಗ್ರತ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಮೈಸೂರು,ಮಂಡ್ಯ, ರಾಮನಗರ, ತುಮಕೂರು, ದಾವಣಗೆರೆ, ಕಲಬುರಗಿ, ರಾಯಚೂರು, ವಿಜಯಪುರ, ಕೊಪ್ಪಳ, ಉತ್ತರಕನ್ನಡ ಬಾಗಲಕೋಟೆ ಜಿಲ್ಲೆಗಳಲ್ಲಿ ಕಾಲೇಜು ಮತ್ತು ಪ್ರೌಢಶಾಲೆಗಳ ಸುತ್ತಮುತ್ತಾ ಮುಂಜಾಗ್ರತ ಕ್ರಮವಾಗಿ ತೀವ್ರ ನಿವಾ ಹಾಗೂ ಭದ್ರತಾ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿದೆ.

ಇದೇ ರೀತಿ ರಾಜ್ಯದ ಹಲವೆಡೆ ಕಾಲೇಜುಗಳ ಆವರಣದಲ್ಲಿ ಬುಧವಾರ ಪ್ರತಿಭಟನೆ, ಆಕ್ರೋಶ, ಪರೀಕ್ಷೆ ಬಹಿಷ್ಕಾರ, ಪ್ರಾಂಶುಪಾಲರು, ಅಧ್ಯಾಪಕರ ಪೇಚಾಟದ ದೃಶ್ಯಗಳು ಸರ್ವೆ ಸಾಮಾನ್ಯವಾಗಿತ್ತು. ಶಿಕ್ಷಣ ಸಂಸ್ಥೆಗಳ ಸುತ್ತಮುತ್ತಾ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.