Breaking NewsLatestಜಿಲ್ಲಾ ಸುದ್ದಿಮಂಡ್ಯಮೆಟ್ರೋರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಹಿಜಾಬ್ ವಿವಾದ, ವಸ್ತ್ರ ಸಂಹಿತೆ ಜಾರಿ ವಿರುದ್ಧ ದೆಹಲಿಯಲ್ಲಿ ಪ್ರತಿಭಟನೆ

ನವದೆಹಲಿ: ಹಿಜಾಬ್ ಪ್ರತಿಭಟನೆಯ ಬಿಸಿ ರಾಷ್ಟ್ರರಾಜಧಾನಿ ದೆಹಲಿಗೂ ತಲುಪಿದೆ. ರಾಜ್ಯದಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದ್ದ ಹಿಜಾಬ್-ಕೇಸರಿ ಪ್ರಕರಣ ಸಂಬಂಧ ಏಐಎಸ್ ಎ (AISA) ಸಂಘಟನೆಯ ಕಾರ್ಯಕರ್ತರು ಗುರುವಾರ ಇಲ್ಲಿನ ಕರ್ನಾಟಕ ಭವನದ ಎದುರು ಪ್ರತಿಭಟನೆ ನಡೆಸಿದರು.

ಶಾಲೆಗಳಲ್ಲಿ ಡ್ರೆಸ್ ಕೋಡ್ ಜಾರಿಗೊಳಿಸಿರುವ ಸರ್ಕಾರದ ಕ್ರಮವನ್ನು ಪ್ರತಿಭಟನಾಕಾರರು ತೀವ್ರವಾಗಿ ಖಂಡಿಸಿದರು. ಇಚ್ಚಿಸಿದ್ದು ಧಾರಿಸುವುದು ಮಹಿಳೆಯ ಮೂಲಭೂತ ಹಕ್ಕು, ಮಂಡ್ಯದ ಸರ್ಕಾರಿ ಕಾಲೇಜಿನಲ್ಲಿ ಮುಸ್ಲಿಂ ವಿದ್ಯಾರ್ಥಿನಿಯನ್ನು ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಸುತ್ತುವರೆದು ಜೈ ಶ್ರೀರಾಮ್ ಘೋಷಣೆ ಕೂಗುವ ಮೂಲಕ ಭಯಭೀತಗೊಳಿಸಿದ್ದಾರೆ ಎಂದು ಅವರು ಆರೋಪಿಸಿದರು.  ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ನಂತರ ಬಿಡುಗಡೆ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button