Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯಸುದ್ದಿ
ಹಿಜಾಬ್ ಪ್ರಕರಣ: ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

Hijab Row Hearing Postpone ಬೆಂಗಳೂರು: ಹಿಜಾಬ್ ಪ್ರಕರಣ ಕುರಿತು ಹೈಕೋರ್ಟ್ ವಿಸ್ತೃತ ಪೀಠದಲ್ಲಿ ಸೋಮವಾರ ವಿಚಾರಣೆ ನಡೆಯಿತು. ಮುಂದುವರಿದ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ರಾಜ್ಯವ್ಯಾಪಿ ಭುಗಿಲೆದ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಸ್ತೃತ ಪೀಠ ಸೋಮವಾರ ಮಧ್ಯಾಹ್ನದಿಂದ ಸಂಜೆ 5 ಗಂಟೆವರೆಗೆ ವಿಚಾರಣೆ ನಡೆಸಿತು. ಸಂಬಂಧಿಸಿದ ವಕೀಲರು ನ್ಯಾಯಾಲಯದಲ್ಲಿ ಹಾಜರಿದ್ದು ವಿಚಾರಣಾ ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು.
