Breaking NewsLatestಉಡುಪಿಜಿಲ್ಲಾ ಸುದ್ದಿಮೆಟ್ರೋರಾಜಕೀಯರಾಜ್ಯಸುದ್ದಿ

Hijab Row: ಹಿಜಾಬ್ : ದೂರು ಸಲ್ಲಿಸಿರುವ ಬಾಲಕಿಯರ ವ್ಯಯಕ್ತಿಕ ವಿವರ ವೈರಲ್, ಪೋಷಕರಿಂದ ದೂರು

ಬೆಂಗಳೂರು: ಉಡುಪಿಯ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ಧರಿಸುವ ಹಕ್ಕಿಗಾಗಿ ಪ್ರತಿಭಟನೆ ನಡೆಸುತ್ತಿರುವ ಆರು ಮುಸ್ಲಿಂ ವಿದ್ಯಾರ್ಥಿನಿಯರ ಪೋಷಕರು ತಮ್ಮ ಮಕ್ಕಳ ವ್ಯಯಕ್ತಿಕ ವಿವರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಹಂಚಿಕೊಳ್ಳುತ್ತಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

ಉಡುಪಿ ಜಿಲ್ಲಾ ಎಸ್ಪಿ ಎನ್.ವಿಷ್ಣುವರ್ಧನ್ ಅವರಿಗೆ ದೂರು ಸಲ್ಲಿಸಿರುವ ಪೋಷಕರು ಬಾಲಕಿಯರ ವಿವರಗಳನ್ನು ಅವರ ಮೊಬೈಲ್ ಸಂಖ್ಯೆ ಸೇರಿದಂತೆ ಸಾರ್ವಜನಿಕ ಡೊಮೇನ್ ಗಳಲ್ಲಿ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸುವಂತೆ ಮನವಿ ಮಾಡಿದ್ದಾರೆ.

ಈ ವಿವರಗಳನ್ನು ಬಳಸಿಕೊಂಡು ದುಷ್ಕರ್ಮಿಗಳು ಬಾಲಕಿಯರಿಗೆ ಬೆದರಿಕೆ ಹಾಕಬಹುದು ಎಂದು ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಲಕಿಯರ ಪೋಷಕರು ತಮಗೆ ಲಿಖಿತ ದೂರು ನೀಡಿದ್ದಾರೆ ಎಂದು ಎಸ್ಪಿ ವಿಷ್ಣುವರ್ಧನ್ ಸ್ಪಷ್ಟಪಡಿಸಿದ್ದಾರೆ.

ಆನ್ ಲೈನ್ ನಲ್ಲಿರುವ ಸಾಕ್ಷ್ಯಾಧಾರಗಳನ್ನು ಸಲ್ಲಿಸುವಂತೆ ದೂರುದಾರರನ್ನು ಕೋರಲಾಗಿದೆ.ಅದು ಬಂದ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದೂ ಅವರು ತಿಳಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button