Breaking NewsLatestರಾಷ್ಟ್ರೀಯಸುದ್ದಿ

ಹಿಮಾಚಲ ಪ್ರದೇಶ: ಭರ್ಜರಿ ಗೆಲುವು ದಾಖಲಿಸಿದ ಮುಖ್ಯಮಂತ್ರಿ ಜೈರಾಮ್ ಠಾಕೂರ್

ಡೆಹ್ರಾಡೂನ್: ಹಿಮಾಚಲ ಪ್ರದೇಶ ವಿಧಾನಸಭೆಗಾಗಿ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯುತ್ತಿದೆ. ಇದೀಗ ಮೊದಲ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮುಖ್ಯಮಂತ್ರಿ ಜೈರಾಮ್ ಠಾಕೂರ್ ಅವರು ಭರ್ಜರಿ ಜಯ ಸಾಧಿಸಿದ್ದಾರೆ.

ಸೆರಾಜ್ ಕ್ಷೇತ್ರದಲ್ಲಿ ಕಣಕ್ಕಿಳಿದ ಜೈರಾಮ್ ಠಾಕೂರ್ ಅವರು ಕಾಂಗ್ರೆಸ್ ನ ಚೇತ್ರಾಮ್ ಠಾಕೂರ್ ಮತ್ತು ಆಮ್ ಆದ್ಮಿಯ ಗೀತಾ ನಂದಾ ಠಾಕೂರ್ ವಿರುದ್ಧ ಗೆಲುವು ದಾಖಲಿಸಿದ್ದಾರೆ.

ಇತ್ತೀಚಿನ ವರದಿಯ ಪ್ರಕಾರ, ಜೈರಾಮ್ ಠಾಕೂರ್ ಅವರು ತಮ್ಮ ಸಾಂಪ್ರದಾಯಿಕ ವಿಧಾನಸಭಾ ಕ್ಷೇತ್ರ ಸೆರಾಜ್‌ ನಿಂದ ಸತತ ಆರನೇ ಬಾರಿಗೆ 20,000 ಕ್ಕೂ ಹೆಚ್ಚು ಮತಗಳಿಂದ ಗೆದ್ದಿದ್ದಾರೆ.

ಹಿಮಾಚಲ ಪ್ರದೇಶದ ಸುಂದರನಗರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ರಾಕೇಶ್ ಕುಮಾರ್ ಗೆಲುವು ಸಾಧಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button