Breaking NewsLatestರಾಷ್ಟ್ರೀಯ
ಹಿಮಾಚಲ ಪ್ರದೇಶದ ಮಾಜಿ ಸಿಎಂ ವೀರಭದ್ರ ಸಿಂಗ್ ನಿಧನ

ಬೆಂಗಳೂರು : ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ಮುಖಂಡ ವೀರಭದ್ರ ಸಿಂಗ್ ಅವರು ಇಂದು ಬೆಳಿಗ್ಗೆ ನಿಧನರಾಗಿದ್ದಾರೆ.
87 ವರ್ಷದ ವೀರಭದ್ರ ಅವರಿಗೆ ಸೋಮವಾರ ಹೃದಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ವೆಂಟಿಲೇಟರನ್ಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗಿನ ಜಾವ ಸಾವನ್ನಪ್ಪಿದ್ದಾರೆ.
ಹಿರಿಯ ಕಾಂಗ್ರೆಸ್ ಮುಖಂಡರ ನಿಧನಕ್ಕೆ ಹಿಮಾಚಲ ಮುಖ್ಯಮಂತ್ರಿ, ಕಾಂಗ್ರೆಸ್ ವರಿಷ್ಠೆ ಸೊನಿಯಾ ಗಾಂಧಿ, ಮಾಜಿ ಪ್ರಧಾನಿ ಮನಮೊಹನ್ ಸಿಂಗ್ ಸೇರಿದಂತೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಆರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದ ವೀರಭದ್ರ ಸಿಂಗ್ 9 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
