Breaking NewsLatestಕ್ರೈಂಜಿಲ್ಲಾ ಸುದ್ದಿರಾಜ್ಯಸುದ್ದಿಹುಬ್ಬಳ್ಳಿ - ಧಾರವಾಡ

ಲವ್ ಜಿಹಾದ್ ವಿರುದ್ಧ ಆಕ್ರೋಶ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ!

ಹುಬ್ಬಳ್ಳಿ: ಗದಗ ಮೂಲದ ಹಿಂದೂ ಮಹಿಳೆಯನ್ನ ಲವ್ ಜಿಹಾದ್ ಮೂಲಕ ಮದುವೆಯಾಗಿ ಅವರ ಪತಿಯೇ ಪತ್ನಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ನಡೆಯನ್ನು‌ ಖಂಡಿಸಿ ಹಾಗೂ ಅರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ, ಹುಬ್ಬಳ್ಳಿಯಲ್ಲಿ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ಹೊರಹಾಕಿದರು.

ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗ ದಳದ ನೇತೃತ್ವದಲ್ಲಿ, ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಲವ್ ಜಿಹಾದ್ ವಿರುದ್ಧ ಹಾಗೂ ಮಹಿಳೆಯ ಪತಿಯ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಲವ್ ಜಿಹಾದ್ ಪ್ರಕರಣಗಳು ಒಂದರ ಹಿಂದೆ ಒಂದು ನಡೆಯುತ್ತಲೇ ಇವೆ. ಹಿಂದೂ ಹೆಣ್ಣು ಮಕ್ಕಳು ಲವ್ ಜಿಹಾದ್‌ಗೆ ಬಲಿಯಾಗುತ್ತಿದ್ದಾರೆ. ಇತ್ತೀಚೆಗೆ ಲವ್ ಜಿಹಾದ್‌ಗೆ ಗದಗ ಮೂಲದ ಮಹಿಳೆ ಮೇಲೆ ನಡೆದ ಮಾರಣಾಂತಿಕ ಹಲ್ಲೆಯೇ ಸಾಕ್ಷಿಯಾಗಿದೆ. ಈಗಾಗಲೇ ಲವ್ ಜಿಹಾದ್ ವಿರುದ್ಧ ಉತ್ತರ ಪ್ರದೇಶದಲ್ಲಿ ಕಠಿಣ ಕಾನೂನು ಜಾರಿಗೆ ತರಲಾಗಿದ್ದು, ಅದೇ ಮಾದರಿಯಲ್ಲಿ ರಾಜ್ಯ ಸರ್ಕಾರ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಜಾರಿಗೆ ತರಬೇಕು. ಜೊತೆಗೆ ಮಾರಣಾಂತಿಕವಾಗಿ ಹಲ್ಲೆಗೆ ಒಳಗಾಗಿರುವ ಮಹಿಳೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಪತಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು. ‌

 ಒಂದು ವೇಳೆ ಲವ್ ಜಿಹಾದ್ ವಿರುದ್ಧ ಕಠಿಣ ಕಾನೂನು ಕ್ರಮ ಜಾರಿಯಾಗದೇ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಪ್ರತಿಭಟನಾಕಾರರು ರಾಜ್ಯ ಸರ್ಕಾರಕ್ಎಕ ಎಚ್ಚರಿಕೆ ನೀಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button