Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ನನಗೆ ಸಂಪುಟ ದರ್ಜೆ ಸ್ಥಾನಮಾನ ಬೇಡ : ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಯಡಿಯೂರಪ್ಪ

ಬೆಂಗಳೂರು : ರಾಜ್ಯದಲ್ಲಿ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆಯ ಸ್ಥಾನ ಮಾನ ನೀಡಿ ಆದೇಶಿಸಿದ್ದರು. ಆದರೆ ಅದನ್ನು ಪಡೆಯಲು ಯಡಿಯೂರಪ್ಪ ಅವರು ನಿರಾಕರಿಸಿದ್ದಾರೆ.

ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿರುವ ಯಡಿಯೂರಪ್ಪ, ಆಗಸ್ಟ್ 7 ರಂದು ಹೊರಡಿಸಿರುವ ಸರ್ಕಾರದ ಆದೇಶದಲ್ಲಿ ತನಗೆ ಮುಖ್ಯಮಂತ್ರಿ ಬೊಮ್ಮಾಯಿ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶಿಸಿದ್ದೀರಿ. ಅದರೆ ತಮಗೆ ಈ ಹಿಂದೆ ನಿಕಟ ಪೂರ್ವ ಮುಖ್ಯಮಂತ್ರಿಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ಮಾತ್ರ ನೀಡಬೇಕು ಹಾಗೂ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ಹೊರಡಿಸಿರುವ ಆದೇಶವನ್ನು ಹಿಂಪಡೆಯಬೇಕೆಂದು ಕೋರಿದ್ದಾರೆ. ಈ ಮೂಲಕ ಯಡಿಯೂರಪ್ಪ ಸಂಪುಟ ದರ್ಜೆ ಸ್ಥಾನಮಾನವನ್ನು ತಿರಸ್ಕರಿಸಿದ್ದಾರೆ.

ಶನಿವಾರ ಈ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಾಜೇಶ ಶಂಕ್ರಪ್ಪ ಸೂಳಿಕೇರಿ ಅಧಿಸೂಚನೆ ಹೊರಡಿಸಿ ನೂತನವಾಗಿ ಪದಾರೋಹಣ ಮಾಡಿದ ಮುಖ್ಯಮಂತ್ರಿಗಳ ಪದವಿಯ ಅವಧಿ ಇರುವವರೆಗೆ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯವನ್ನು ನೀಡುವಂತೆ ಆದೇಶಿಸಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button