Breaking Newsಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಸಿಎಂ ಬದಲಾಣೆಯಾದಲ್ಲಿ ಉತ್ತರ ಕರ್ನಾಟಕದವರೇ ಸಿಎಂ ಆಗಲಿ : ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ

ಧಾರವಾಡ : ಬಿಜೆಪಿ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ.‌ ಹೀಗಾಗಿ ಒಂದು ವೇಳೆ ನಾಯಕತ್ವ ಬದಲಾವಣೆ ಮಾಡಿ ಸಿಎಂ ಬದಲಿಸಿದ್ರೆ ಉತ್ತರ ಕರ್ನಾಟಕದವರೇ ಮತ್ತೆ ಸಿಎಂ ಆಗಲಿ ಎಂದು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎನ್ ಹೆಚ್ ಕೋನರೆಡ್ಡಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಮಾಡೋದು ಅವರ ಆಂತರಿಕ‌ ವಿಚಾರ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಸವರಾಜ್ ಬೊಮ್ಮಾಯಿ , ಸೇರಿದಂತೆ ಸಿಎಂ ಅವರಾಗ್ತಾರೆ, ಇವರಾಗ್ತಾರೆ ಅಂತಾ ಚರ್ಚೆಯಾಗುತ್ತಿದೆ. ಆದರೆ ಸಿಎಂ‌ ಬದಲಾವಣೆಯಾದ್ರೆ ಉತ್ತರ ಕರ್ನಾಟಕದವರು ಯಾರಾದರೂ ಆಗಲಿ ಎಂದಿದ್ದಾರೆ.

ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಪಕ್ಷಾತೀತ ನಾಯಕ

ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಕೇಶವ ಕುಂಜಕ್ಕೆ (ಆರ್‌ಎಸ್‌ಎಸ್ ಕಚೇರಿ) ಭೇಟಿ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾನು ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ಆದರೆ ಕೇಶವ ಕುಂಜಕ್ಕೆ ಭೇಟಿ ನೀಡುವುದಿಲ್ಲ. ಬಸವರಾಜ ಹೊರಟ್ಟಿ ಯವರು ನಮ್ಮ ನಾಯಕರು, ಅವರು ಈಗ ಪಕ್ಷಾತೀತ. ಅವರು ಈಗ ಸಭಾಪತಿ, ಪಕ್ಷ ಬರುವುದಿಲ್ಲ. ಡಿಸಿಎಂ ಅಶ್ವತ್ಥನಾರಾಯಣ ಅವರ ಜೊತೆಗಿನ‌ ಆತ್ಮೀಯತೆಯಿಂದ ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ್ದಾರೆ. ಬಸವರಾಜ್ ಹೊರಟ್ಟಿಯವರು ಜೆಡಿಎಸ್‌ನಲ್ಲಿ ಇರುತ್ತಾರೆ ಎಂದು ಹೇಳಿದರು.

ಮುಂದಿನ ಬಾರಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುವುದು ಪಕ್ಕಾ.

ಮುಂದಿನ ವಿಧಾನಸಭೆ ಚುಣಾವಣೆಗೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ. ಕುಮಾರಸ್ವಾಮಿ ಅವರೇ ಮುಖ್ಯಮಂತ್ರಿ ಆಗುತ್ತಾರೆ. ಮುಂದಿನ ಚುಣಾವಣೆಗೆ ಇನ್ನೂ ಎರಡು ವರ್ಷ ಬಾಕಿ ಇರುವಾಗಲೆ 100 ವಿಧಾನಸಭಾ‌ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಘೋಷಣೆ ಮಾಡುತ್ತೇವೆ. ಜನವರಿ ತಿಂಗಳ ಪ್ರಾರಂಭದಲ್ಲಿ ಕುಮಾರಸ್ವಾಮಿಯವರು ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಾರೆ ಎಂದು ತಿಳಿಸಿದರು.

Spread the love

Related Articles

Leave a Reply

Your email address will not be published. Required fields are marked *

Back to top button