Breaking NewsLatestಮೆಟ್ರೋ

ಪತ್ರಿಕೆ, ಪುಸ್ತಕ ಓದಿ, ಚಿತ್ರ ವೀಕ್ಷಿಸಿದರೆ ಕನ್ನಡ ಸಂಸ್ಕೃತಿ ಉಳಿಯುತ್ತೆ : ಸಚಿವ ಸುನೀಲ್​​​​​ ಕುಮಾರ್​

ಬೆಂಗಳೂರು : ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಬೆಳಸಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ.

ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದ ಅವರು, ಇಂಧನ ಇಲಾಖೆಯಲ್ಲಿ ಸಂಸ್ಕೃತಿ ತರುವ, ಸಂಸ್ಕೃತಿ ಇಲಾಖೆಗೆ ಪವರ್ ತುಂಬುವ ಕೆಲಸ ಮಾಡಬೇಕಿದೆ, ಅದನ್ನು ಅತ್ಯಂತ ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಎರಡು ಇಲಾಖೆಗಳ ಆಡಳಿತ ಸುಧಾರಣೆಗೆ ಮತ್ತು ಕಾರ್ಯಕ್ರಮಗಳ ಸಮರ್ಥ ಅನುಷ್ಠಾನಕ್ಕೆ ಬೇಕಾಗುವ ಎಲ್ಲಾ ಕ್ರಮಗಳನ್ನು ನಿರ್ದಾಕ್ಷಿಣ್ಯವಾಗಿ ಕೈಗೊಳ್ಳುತ್ತೇನೆ ಎಂದುತಿಳಿಸಿದರು.

ಪ್ರಶಸ್ತಿ ಪ್ರದಾನ

ಇದೇ ಸಂದರ್ಭದಲ್ಲಿ 2019 ಮತ್ತು 20 ನೇ ಸಾಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಾನಪದಶ್ರೀ ಪ್ರಶಸ್ತಿ ಗೆ ಆಯ್ಕೆ ಆದ ಶ್ರೀಮತಿ ಭೀಮವ್ವ ದೊಡ್ಡ ಬಾಳವ್ವ ಶಿಳ್ಳೆಕ್ಯಾತರ, ಹಾಗೂ ಬಿ ವಿ ಕಾರಂತ ಪ್ರಶಸ್ತಿಗೆ ಆಯ್ಕೆಆದ ಹೆಚ್.ವಿ.ವೆಂಕಟಸುಬ್ಬಯ್ಯ ಅವರಿಗೆ ಕಲಾಕ್ಷೇತ್ರದ ಮುಂಭಾಗದಲ್ಲಿಯೇ ಪ್ರಶಸ್ತಿ ಪ್ರದಾನ ಮಾಡಿದರು.

ಮೆಟ್ಟಿಲ ಮೇಲೆ ಕಡತಕ್ಕೆ ಸಹಿ

ಕಲಾಕ್ಷೇತ್ರದ ಮೆಟ್ಟಿಲುಗಳ ಮೇಲೆ ಕುಳಿತು ಇಲಾಖೆಯ ಕಡತಗಳಿಗೆ ಸಚಿವ ಸುನೀಲ್​​​​​ ಕುಮಾರ್​​ ಸಹಿಮಾಡಿ ಅಧಿಕೃತ ಕಾರ್ಯಾರಂಭ ಮಾಡಿದರು.

ಆ ನಂತರ ಕಲಾಕ್ಷೇತ್ರದ ಆವರಣದಲ್ಲಿ ಇರುವ ಕನ್ನಡ ಪುಸ್ತಕ ಪ್ರಾಧಿಕಾರದ ಸಿರಿಗನ್ನಡ ಮಾರಾಟ ಮಳಿಗೆಗೆ ಭೇಟಿ ಕೊಟ್ಟು ಕನಕಾವಲೋಕನ, ಪುಸ್ತಕ ಹಾಗೂ ಡಿ ವಿ ಜಿ ಅವರ ನೆನಪಿನ ಚಿತ್ರಗಳು ಮತ್ತು ಶಿವರಾಮ ಕಾರಂತರ ನಾಟಕಗಳು ಎಂಬ ಮೂರು ಪುಸ್ತಕಗಳನ್ನು ದುಡ್ಡುಕೊಟ್ಟು ಖರೀದಿ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button