Breaking NewsLatestಜಿಲ್ಲಾ ಸುದ್ದಿದಾವಣಗೆರೆ

ಪಡಿತರ ಅಕ್ಕಿ ಅಕ್ರಮ ಸಾಗಾಟ: ಹೊನ್ನಾಳಿಯಲ್ಲಿ ಲಾರಿ ಸಮೇತ ಸಿಕ್ಕಿ ಬಿದ್ದ ಆರೋಪಿ…!

ದಾವಣಗೆರೆ: ಸರ್ಕಾರ ಬಡವರಿಗೆ ಉಚಿತವಾಗಿ ನೀಡುವ ಅಕ್ಕಿ ಕಾಳಸಂತೆಯಲ್ಲಿ‌ ಮಾರಾಟ ಮಾಡಲಾಗುತ್ತಿದೆ. ಜಿಲ್ಲೆಯ ವಿವಿಧೆಡೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿರುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಪೊಲೀಸರು ದಾಳಿ ನಡೆಸಿ ಪತ್ತೆ ಹಚ್ಚುತ್ತಲೇ ಇದ್ದಾರೆ. ಆದರೂ ಅಕ್ರಮ ಸಾಗಾಟ ನಿಂತಿಲ್ಲ. ಇನ್ನು ಹೊನ್ನಾಳಿಯಲ್ಲಿ ಜಾಸ್ತಿ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಯು ಹೆಚ್ಚಾಗಿ ನಡೆಯುತ್ತಿದೆ.

ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿ ವಶಕ್ಕೆ ಪಡೆದಿರುವ ಹೊನ್ನಾಳಿ ಪೊಲೀಸರು ಓರ್ವ ಆರೋಪಿ ಬಂಧಿಸಿದ್ದಾರೆ.

ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಸಮೀಪ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 2.40ಲಕ್ಷ ರೂಪಾಯಿ ಮೌಲ್ಯದ 163 ಕ್ವಿಂಟಾಲ್ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ.

ಹೊನ್ನಾಳಿ ತಾಲೂಕಿನ ಕುಂದೂರು ಗ್ರಾಮದ ಕಡೆಯಿಂದ ಮಾಸಡಿ ಗ್ರಾಮದ ಮೂಲಕ ಸಾಗಾಟ ಮಾಡಲಾಗುತಿತ್ತು. ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಲಾರಿಯಲ್ಲಿ ಸಾಗಿಸಲಾಗುತ್ತಿದೆ‌ ಎಂಬ ಖಚಿತ ವರ್ತಮಾನದ ಮೇರೆಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಆರ್. ಬಿ. ಬಸರಗಿ ಹಾಗೂ ಚನ್ನಗಿರಿ ಉಪವಿಭಾಗದ ಡಿವೈಎಸ್ಪಿ ಸಂತೋಷ್ ಅವರ ಮಾರ್ಗದರ್ಶನದಲ್ಲಿ ಹೊನ್ನಾಳಿ ಸಿಪಿಐ ದೇವರಾಜ್ ಅವರು ಕಾರ್ಯಾಚರಣೆ ನಡೆಸಿ ಲಾರಿ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button