Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಬಜೆಟ್ ನ ಘೋಷಣೆಗಳ ಅನುಷ್ಠಾನಕ್ಕೆ ಸೂಚನೆ ನೀಡಲಾಗಿದೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಾ.30 ರಂದು ಬಜೆಟ್ ಅಧಿವೇಶನವು ಮುಕ್ತಾಯವಾಗುತ್ತಿದೆ. ಈಗಾಗಲೇ ಬಜೆಟ್ ಘೋಷಣೆಗಳ ಕುರಿತಂತೆ ಸದನದಲ್ಲಿಯು ಚರ್ಚೆ ಮಾಡಲಾಗುತ್ತಿದೆ. ಹಾಗಾಗಿ ಬಜೆಟ್ ಅಧಿವೇಶನ ಮುಗಿಯುತ್ತಿದ್ದ ಹಾಗೇ ಬಜೆಟ್ನ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತರಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್ನಲ್ಲಿ ಘೋಷಣೆಯಾದ ಎಲ್ಲ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಾಗುತ್ತಿದೆ. ಎಪ್ರಿಲ್ 30 ರ ಒಳಗಡೆ ಎಲ್ಲ ಕಾರ್ಯಕ್ರಮಗಳ ಕಾರ್ಯಾದೇಶವನ್ನು ನೀಡುತ್ತೇನೆ. ಎಲ್ಲ ಕಾರ್ಯಕ್ರಮಗಳು ಸರಿಯಾದ ರೀತಿಯಲ್ಲಿ ಅನುಷ್ಠಾನವಾಗಬೇಕು ಹಾಗೂ ಹಣಕಾಸು ನಿರ್ವಹಣೆಯು ಸರಿಯಾದ ರೀತಿಯಲ್ಲಿ ಆಗಬೇಕು ಎನ್ನುವ ಉದ್ದೇಶದಿಂದ ಚೀಫ್ ಸೆಕ್ರೆಟರಿ ನೇತೃತ್ವದಲ್ಲಿ ಸಮಿತಿ ಕೂಡಾ ರಚನೆ ಮಾಡಲಾಗುವುದು. ಅದಕ್ಕೆ ಸೋಮಾವಾರ ಅಧಿಕೃತ ಆದೇಶವನ್ನು ಮಾಡಲಾಗುವುದು ಎಂದರು.

ಅಂತರಾಜ್ಯ ಜಲವಿವಾದ ಪ್ರಮುಖವಾದ ಕೆಲಸಗಳಲ್ಲಿ ಮುಖ್ಯವಾದುದ್ದಾಗಿದೆ. ಸಮಸ್ಯೆ ಪರಿಹಾರಕ್ಕೆ ಹೆಚ್ಚು ಒತ್ತು ನೀಡಬೇಕಾಗಿದೆ. ರಾಜ್ಯದ ಪರ ಕಾನೂನಾತ್ಮಕವಾಗಿ ನ್ಯಾಯಾಲಯದಲ್ಲಿ ವಿಚಾರ ಮಂಡನೆಯನ್ನು ನಮ್ಮ ನ್ಯಾಯಾಧೀಶರು ಮಾಡುತ್ತಿದ್ದಾರೆ. ಆದಷ್ಟು ಬೇಗ ನ್ಯಾಯಾಲಯದಲ್ಲಿ ನಾವು ಪರಿಹಾರ ಕಂಡುಕೊಳ್ಳಬೇಕಾಗಿದೆ. ಅದರ ಕುರಿತು ಹೆಚ್ಚಿನ ಗಮನ ಹರಿಸಲಾಗುವುದು. ಕೇಂದ್ರದಿಂದಲೂ ಕೂಡಾ ಅನುಮತಿಯನ್ನು ಪಡೆದುಕೊಳ್ಳುವ ದೃಷ್ಠಿಯಿಂದ ಇಲಾಖೆಯ ಅಧಿಕಾರಿಗಳಿಗೆ ಸಿದ್ಧತೆ ಮಾಡಿಕೊಳ್ಳಲು ಹೇಳಲಾಗಿದೆ. ಎಪ್ರಿಲ್ ಮೊದಲ ವಾರದಲ್ಲಿ ಕೇಂದ್ರದ ನಾಯಕರನ್ನು ಭೇಟಿ ಮಾಡಿ ಮಾತನಾಡಲಾಗುವುದು ಎಂದು ತಿಳಿಸಿದರು.

ಎಸ್ ಎಸ್ ಎಲ್ ಸಿ ಪರೀಕ್ಷೆಯ ಕುರಿತಂತೆ ಈಗಾಗಲೇ ಎಲ್ಲ ತಯಾರಿಗಳನ್ನು ಮಾಡಲಾಗಿದೆ. ಶಿಕ್ಷಣ ಇಲಾಖೆ ಅಚ್ಚುಕಟ್ಟಾಗಿ ಸಿದ್ಧತೆ ಮಾಡಿಕೊಂಡಿದೆ. ಎಸ್ಎಸ್ಎಲ್ಸಿ ಮಕ್ಕಳೆಲ್ಲರು ಪರೀಕ್ಷೆಯನ್ನು ಬರೆಯುವ ಮೂಲಕ, ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಯಾವುದೇ ಆತಂಕವಿಲ್ಲದೆ ಮಕ್ಕಳೆಲ್ಲರು ಪರೀಕ್ಷೆಯಲ್ಲಿ ಭಾಗಿಯಾಗಬೇಕು ಎಂದು ಮನವಿ ಮಾಡಿದರು.

Spread the love

Related Articles

Leave a Reply

Your email address will not be published. Required fields are marked *

Back to top button