Breaking NewsLatestರಾಷ್ಟ್ರೀಯಸುದ್ದಿ

ನೆದರ್ಲೆಂಡ್ಸ್ ಎದುರು ಸುಲಭವಾಗಿ ಗೆದ್ದ ಭಾರತ

ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನ ವಿರುದ್ಧ ಗೆಲುವಿನೊಂದಿಗೆ ಅಮೋಘ ಪ್ರದರ್ಶನ ನೀಡಿದ ಟೀಂ ಇಂಡಿಯಾ ಈಗ ಈ ಟೂರ್ನಿಯಲ್ಲಿ ತನ್ನ ಯಶಸ್ಸಿನ ಓಟವನ್ನು ಮುಂದುವರಿಸಿದೆ. ಸೂಪರ್-12 ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ, ಟೀಂ ಇಂಡಿಯಾ ಯಾವುದೇ ತೊಂದರೆಯಿಲ್ಲದೆ ನೆದರ್ಲೆಂಡ್ಸ್ ತಂಡವನ್ನು 56 ರನ್‌ಗಳಿಂದ ಸೋಲಿಸುವುದರೊಂದಿಗೆ ಪಂದ್ಯಾವಳಿಯಲ್ಲಿ ತನ್ನ ಸತತ ಎರಡನೇ ಗೆಲುವನ್ನು ದಾಖಲಿಸಿದೆ.

ಸೂರ್ಯಕುಮಾರ್ ಯಾದವ್, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅರ್ಧಶತಕಗಳ ಆಧಾರದ ಮೇಲೆ ಮೊದಲು ಬ್ಯಾಟಿಂಗ್ ಮಾಡಿದ ರೋಹಿತ್ ಪಡೆ 20 ಓವರ್​ಗಳಲ್ಲಿ 2 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಿತು. ಗುರಿ ಬೆನ್ನಟ್ಟಿದ್ದ ನೆದರ್ಲೆಂಡ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 123 ರನ್​ಗಳಿಸಲಷ್ಟೇ ಶಕ್ತವಾಯಿತು.

Related Articles

Leave a Reply

Your email address will not be published. Required fields are marked *

Back to top button