Breaking NewsLatestಬೆಳಗಾವಿ
ಮೈದಾಳಲಿದೆ ಕಿತ್ತೂರು ಅರಮನೆ ಪ್ರತಿರೂಪ : ನೀಲನಕ್ಷೆ ಸಿದ್ದಪಡಿಸಲು ಮುಖ್ಯಮಂತ್ರಿ ಸೂಚನೆ

ಬೆಳಗಾವಿ, ಡಿ. 23- ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ, ಕಿತ್ತೂರು ಸಂಸ್ಥಾನದ ಅರಮನೆಯ ಪ್ರತಿರೂಪವನ್ನು ನಿರ್ಮಿಸಲು ಯೋಜನೆ ರೂಪಿಸಿದ್ದು, ಇದರ ಸಾಕಾರಕ್ಕೆ ಲೋಕೋಪಯೋಗಿ ಇಲಾಖೆ ಮೂಲಕ ಡಿ.ಪಿ.ಆರ್, ಅಂದಾಜುಪಟ್ಟಿ, ನೀಲನಕ್ಷೆ ಸಿದ್ಧಪಡಿಸಿ, ಅನುಮೋದನೆಗಾಗಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಸುವರ್ಣ ವಿಧಾನಸೌಧದಲ್ಲಿ ಗುರುವಾರ ಪ್ರಾಧಿಕಾರವು ಈ ಯೋಜನೆಯ ಕುರಿತ ಪ್ರಾತ್ಯಕ್ಷಿಕೆ ವೀಕ್ಷಿಸಿದರು. ಕಿತ್ತೂರು ಕೋಟೆಯ ಆವರಣದಲ್ಲಿರುವ ಅರಮನೆಯ ಅವಶೇಷಗಳನ್ನು ಸಂರಕ್ಷಿಸುವಂತೆಯೂ ಈ ಸಂದರ್ಭದಲ್ಲಿ ಸೂಚಿಸಿದರು.
ಈ ಉದ್ದೇಶಿತ ಅರಮನೆಯಲ್ಲಿ ಕಿತ್ತೂರು ಸಂಸ್ಥಾನದ ಇತಿಹಾಸ, ಚನ್ನಮ್ಮಳ ಹೋರಾಟ, ಸ್ಥಳೀಯ ಸಂಸ್ಕೃತಿ, ಜನಜೀವನ ಬಿಂಬಿಸಲು ಬಹುಮಾಧ್ಯಮ ಬಳಕೆ ಮಾಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಪ್ರಾಧಿಕಾರ ಸದಸ್ಯರುಗಳು ಹಾಗೂ ಹಿರಿಯ ಅಧಿಕಾರಿಗಳು ಇದ್ದರು.
