Breaking NewsLatestಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್: ಮೂವರ ಬಂಧನ!

ಹುಬ್ಬಳ್ಳಿ: ಕಳೆದ ವಾರವಷ್ಟೇ ಐಪಿಎಲ್ ಕ್ರಿಕೆಟ್ ಪಂದ್ಯವಾಳಿಗಳು ಆರಂಭವಾಗಿದ್ದು, ಪ್ರಶಸ್ತಿಗಾಗಿ ತಂಡಗಳು ಈಗ ಮೈದಾನದಲ್ಲಿ ಕಾದಾಟ ನಡೆಸುತ್ತಿವೆ. ಆದರೆ ಈ ಪಂದ್ಯಗಳನ್ನೇ ಮುಂದಿಟ್ಟುಕೊಂಡು ಕೆಲವು ಬೆಟ್ಟಿಂಗ್ ಕುಳಗಳು ಹಣ ಮಾಡಲು ಮುಂದಾಗಿದ್ದಾರೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಮೂವರನ್ನು ಹುಬ್ಬಳ್ಳಿ ಬೆಂಡಿಗೇರಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಗರದ ಕ್ರಿಶ್ಚಿಯನ್ ಕಾಲೋನಿಯ ದೊಡ್ಡಮನಿ ಮೈದಾನದಲ್ಲಿ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪುಣೆಯಲ್ಲಿ ನಡೆಯುತ್ತಿದ್ದ ಐಪಿಎಲ್ನ ಸನ್ ರೈಜರ್ಸ್ ಹೈದರಾಬಾದ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳ ನಡುವಿನ ಪಂದ್ಯದ ವೇಳೆ ಓವರ್, ವಿಕೆಟ್ ಸೋಲು, ಗೆಲುವಿನ ಮೇಲೆ ಬೆಟ್ಟಿಂಗ್ ಆಡುತ್ತಿದ್ದರು ಎಂದು ಪೊಲೀಸರ ವಿಚಾರಣೆ ವೇಳೆ ತಿಳಿದು ಬಂದಿದೆ.
ಆರೋಪಿಗಳಿಂದ 11,100 ರೂ. ನಗದು ಮತ್ತು ೧೦ ಸಾವಿರ ಮೌಲ್ಯದ ಎರಡು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇದು ಐಪಿಎಲ್ ಬೆಟ್ಟಿಂಗ್ ಆಡುವ ಕುಳಗಳಿಗೆ ಬಿಸಿ ತಟ್ಟಿದಂತಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button