ಬಾಂಗ್ಲಾದಲ್ಲಿ ಹಿಂದೂ ದೇಗುಲದ ಮೇಲೆ ದುಷ್ಕರ್ಮಿಗಳ ದಾಳಿ

ಢಾಕಾ: ಇಸ್ಕಾನ್ ದೇವಾಲಯದ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ಮಾಡಿ ದೇಗುಲಗಳಲ್ಲಿದ್ದ ವಸ್ತುಗಳನ್ನು ಧ್ವಂಸಗೊಳಿಸಿದ್ದಾರೆ. ಹಿಂದೂ ದೇವಾಲಯದ ಮೇಲೆ ಬರೋಬ್ಬರಿ 200 ಜನರು ಗುಂಪೊಂದು ದಾಳಿ ಮಾಡಿದೆ. ದೇವಾಲದಲ್ಲಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಲ್ಲದೆ ಅರ್ಚಕರ ಮೇಲೆ ಮನಬಂದಂತೆ ಹಲ್ಲೆ ಮಾಡಿದ್ದಾರೆ.
ದೇಗುಲದ ಮೇಲೆ 200 ಜನರು ಗುಂಪೊಂದು ಏಕಾಏಕಿ ದಾಳಿ ಮಾಡಿದ್ದಾರೆ. ದೇವಾಲಯದ ವಸ್ತುಗಳನ್ನು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಬಾಂಗ್ಲಾ ಮೂಲದ ಹಾಜೀ ಶಫೀವುಲ್ಲಾ ನೇತೃತ್ವದಲ್ಲಿ ಇಸ್ಕಾನ್ ದೇಗುಲ ಮೇಲೆ ಅಟ್ಯಾಕ್ ಮಾಡಲಾಗಿದೆ. ಕಳೆದ ರಾತ್ರಿ 8 ಗಂಟೆ ಸುಮಾರಿಗೆ ಇಸ್ಕಾನ್‍ನಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಗುತ್ತಿತ್ತು. ಈ ವೇಳೆ ಏಕಾಏಕಿ ನುದ್ದಿದ 200 ಜನರ ಗುಂಪು ದಾಳಿ ಮಾಡಿದೆ. ದೇವಾಲಯದಲ್ಲಿರುವ ಬೆಳ್ಳಿ ದೀಪ ಹಾಗೂ ಬೆಲೆ ಬಾಳುವ ವಸ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.
ಇನ್ನು ಈ ದಾಳಿ ವೇಳೆ ಸುಮಾರು 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.ಸದ್ಯ ಗಾಯಾಳು ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಕುರಿತು ಬಾಂಗ್ಲಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
