Breaking NewsLatestಜಿಲ್ಲಾ ಸುದ್ದಿಬೆಳಗಾವಿರಾಜಕೀಯ

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜತೆ ಜಾರಕಿಹೊಳಿ ಸಹೋದರರಿಂದ ಪ್ರತ್ಯೇಕ ಸಭೆ

ಬೆಳಗಾವಿ : ಗೋಕಾಕ್‍ನಲ್ಲಿಯೇ ಇದ್ದರೂ ಬಿಜೆಪಿ ಸಭೆಗೆ ಗೈರಾಗುವ ಮೂಲಕ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ರಮೇಶ ಜಾರಕಿಹೊಳಿ ಇದೀಗ ಖಾಸಗಿ ಹೋಟೆಲ್​​ನಲ್ಲಿ ತಂಗಿರುವ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ಭೇಟಿಗೆ ಆಗಮಿಸಿದ್ದಾರೆ. ಜಾರಕಿಹೊಳಿ‌ ಸಹೋದರರು ಪ್ರತ್ಯೇಕ ಸಭೆ ನಡೆಸುತ್ತಿದ್ದು, ತೀವ್ರ ಕುತೂಹಲ ಮೂಡಿಸಿದೆ.

ನಗರದ ಖಾಸಗಿ ಹೋಟೆಲ್​​ನಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಸಂಘಟನಾತ್ಮಕ ಸಭೆಗೆ ಗೈರಾಗಿದ್ದ‌ ಮಾಜಿ ಸಚಿವ ರಮೇಶ್ ಜಾರಕಿಹೊಳಿ‌, ಸಭೆ ನಂತರ ಎಲ್ಲ ನಾಯಕರು ತೆರಳಿದ ಬಳಿಕ ಅರುಣ್ ಕುಮಾರ್​ ಭೇಟಿಗೆ ಆಗಮಿಸಿದ್ದಾರೆ. ಈ ವೇಳೆ ಅರುಣ್ ಕುಮಾರ್ ಭೇಟಿಯಾಗಿ ಪ್ರತ್ಯೇಕ ಮಾತುಕತೆ ನಡೆಸುತ್ತಿದ್ದು, ರಮೇಶ್ ಜಾರಕಿಹೊಳಿ‌ಗೆ ಸಹೋದರರಾದ ಬಾಲಚಂದ್ರ, ಲಖನ್ ಜಾರಕಿಹೊಳಿ‌ ಸಾಥ್ ನೀಡಿದ್ದಾರೆ.

ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್​​ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ಶಾಸಕರು, ಮುಖಂಡರು ಭಾಗಿಯಾಗಿದ್ದರು. ಆದರೆ, ಗೋಕಾಕ್ ಶಾಸಕ ರಮೇಶ ಜಾರಕಿಹೊಳಿ ಮಾತ್ರ ಗೈರಾಗಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button