Breaking NewsLatest
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿಯ ಜಾಮೀನು ಅರ್ಜಿ ವಜಾ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಮೋಹನ್ ನಾಯಕ್ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ.
ಆರೋಪಿಯ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ, ಈ ಆದೇಶ ನೀಡಿದೆ. ಚಾರ್ಜ್ ಶೀಟ್ ವಿಳಂಬವಾಗಿದೆ ಅಥವಾ ಮ್ಯಾಜಿಸ್ಟ್ರೇಟ್ ಕಾಗ್ನಿಸೆನ್ಸ್ ತೆಗೆದುಕೊಳ್ಳುವಲ್ಲಿ ತಡವಾಗಿದೆ ಎಂಬ ಕಾರಣಕ್ಕೆ ಆರೋಪಿಯ ಬಂಧನವು.
ನಿಯಮಬಾಹಿರವಾಗುವುದಿಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಪರಿಗಣಿಸಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಿಸಿದ್ದು, ಆರೋಪಿಯ ಜಾಮೀನು ಮನವಿಯನ್ನು ತಿರಸ್ಕರಿಸಿದೆ
