Breaking NewsLatestಜಿಲ್ಲಾ ಸುದ್ದಿದಾವಣಗೆರೆ

ಜಸ್ಟ್ ಮಿಸ್… ರೈಲಿನಡಿ‌ ಸಿಲುಕುತ್ತಿದ್ದ ಪ್ರಯಾಣಿಕನ ರಕ್ಷಣೆ.. ವೈರಲ್ ಆಯ್ತು ವಿಡಿಯೋ

ದಾವಣಗೆರೆ: ನಗರದ ರೈಲ್ವೆ ನಿಲ್ದಾಣದಲ್ಲಿ ರೈಲು ಹತ್ತಲು ಹೋಗಿ ಜಾರಿ ಬಿದ್ದ ಪ್ರಯಾಣಿಕರೊಬ್ಬರನ್ನು ರೈಲ್ವೆ ಪೊಲೀಸ್ ಸಿಬ್ಬಂದಿ‌ ಸಿನಿಮೀಯ ರೀತಿಯಲ್ಲಿ ರಕ್ಷಿಸಿದ ವಿಡಿಯೋ ಸದ್ಯ ವೈರಲ್ ಆಗಿದೆ.

ದಾವಣಗೆರೆ ರೈಲ್ವೆ ಪೊಲೀಸ್  ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ನಾಗರಾಜ್ ಬಿ. ಸಮಯ ಪ್ರಜ್ಞೆಯಿಂದ ವ್ಯಕ್ತಿಯ ಅಮೂಲ್ಯ ಜೀವನ ಉಳಿದಿದೆ.

ನಾಗರಾಜ್ ಬಿ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂ ನಂಬರ್ 2 ರಲ್ಲಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು‌.ಈ ವೇಳೆ ಧಾರವಾಡದಿಂದ ಬೆಂಗಳೂರಿಗೆ ಹೋಗುತ್ತಿದ್ದ ರೈಲು ದಾವಣಗೆರೆ ರೈಲ್ವೆ ನಿಲ್ದಾಣಕ್ಕೆ ನಿಂತು ಕೊಂಚ ಸಮಯದಲ್ಲಿ ಹೊರಟಿದೆ. ಈ ವೇಳೆ ಆತುರವಾಗಿ ರೈಲು ಹತ್ತಲು ಹೋದ ಪ್ರಯಾಣಿಕರೊಬ್ಬರು ರೈಲು ಅಡಿಗೆ ಸಿಲುಕಿ ಪ್ರಾಣ ಕಳೆದುಕೊಳ್ಳಬೇಕಾಗಿತ್ತು‌‌. ಆದ್ರೆ ನಾಗರಾಜ್ ಅವರ ಸಮಯಪ್ರಜ್ಞೆಯಿಂದ ಪಾರಾಗಿದ್ದಾರೆ‌.

ರಕ್ಷಣೆಗೊಳಗಾದ ಪ್ರಯಾಣಿಕರು ಹಾಗೂ ರೈಲ್ವೆ ಇಲಾಖೆಯ ಪೊಲೀಸ್ ನಿರೀಕ್ಷಕರು ನಾಗರಾಜ್ ಅವರನ್ನು ಅಭಿನಂದಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button