Rituraj Awasthi: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ರಿತುರಾಜ್ ಅವಸ್ಥಿ ನೇಮಕ

ನವದೆಹಲಿ : ಕರ್ನಾಟಕ ಹೈಕೋರ್ಟ್ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಅಲಾಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಯಾಗಿರುವ ರಿತುರಾಜ್ ಅವಸ್ಥಿ ಅವರ ಹೆಸರನ್ನು ಸುಪ್ರೀಂಕೋರ್ಟ್ ಕೊಲಿಜಿಯಂ ಶಿಫಾರಸು ಮಾಡಿದೆ.
ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಎ. ಎಸ್. ಓಕಾ ಅವರು ಸುಪ್ರೀಂಕೋರ್ಟ್‌ಗೆ ಪದೋನ್ನತಿ ಪಡೆದ ಬಳಿಕ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಅವರು ರಾಜ್ಯ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇದೀಗ ಅವರನ್ನು ತೆಲಂಗಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಶಿಫಾರಸು ಮಾಡಲಾಗಿದೆ.
ದೇಶದ ವಿವಿಧ ಹೈಕೋರ್ಟ್‌ಗಳಿಗೆ ನೇಮಕವಾಗಿರುವ ಮುಖ್ಯ ನ್ಯಾಯಮೂರ್ತಿಗಳಲ್ಲಿ ಐದು ಮಂದಿ ಬೇರೆ ಹೈಕೋರ್ಟ್‌ಗಳಲ್ಲಿ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದು, ವರ್ಗಾವಣೆಗೊಂಡವರಾಗಿದ್ದಾರೆ. ಉಳಿದ ಎಂಟು ಮಂದಿ ಕಿರಿಯ ನ್ಯಾಯಮೂರ್ತಿಗಳಾಗಿದ್ದು ಪದೋನ್ನತಿ ಪಡೆದಿದ್ದಾರೆ.
ಸೆಪ್ಟೆಂಬರ್ 16 ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ನೇತೃತ್ವದಲ್ಲಿ ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದೆ
