Breaking NewsLatestಮನರಂಜನೆರಾಜಕೀಯಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡ ನಿರ್ದೇಶಕ ಎಸ್ ನಾರಾಯಣ್

ಕನ್ನಡ ಚಿತ್ರರಂಗದ ಖ್ಯಾತ ನಟ, ನಿರ್ದೇಶಕ ಎಸ್​ ನಾರಾಯಣ್ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ. ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಎಸ್​ ನಾರಾಯಣ್​ ಅಧಿಕೃತವಾಗಿ ಕೈ ಪಕ್ಷಕ್ಕೆ ಸೇರಿದ್ದಾರೆ.

ಎಸ್ ನಾರಾಯಣ್ ಕಾಂಗ್ರೆಸ್​ ಪಕ್ಷ ಸೇರ್ಪಡೆಗೊಂಡ ಕುರಿತು ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬಹು ಮುಖ ಪ್ರತಿಭೆ, ಸರಳ ವ್ಯಕ್ತಿತ್ವದ ನಾರಾಯಣ್ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಅವರು ನಮ್ಮ ಪಕ್ಷದ ತತ್ವ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಸೇರ್ಪಡೆ ಆಗಿದ್ದಾರೆ. ಮುಂದಿನ ದಿನಗಳಲ್ಲಿ ವಾಣಿಜ್ಯ ಮಂಡಳಿ ಸೇರಿದಂತೆ ಸಮುದಾಯದ ಸಂಘಟನೆ ಮಾಡಲಿದ್ದಾರೆ. ಇನ್ನು ಪಕ್ಷಕ್ಕೆ ಸೇರುವವರ ದೊಡ್ಡ ಪಟ್ಟಿ ಇದೆ. ಅವರೆಲ್ಲಾ ಈಗಾಗಲೇ ಅರ್ಜಿ ಹಾಕಿದ್ದಾರೆ. ಅದಕ್ಕೆ ಸಮಯ ನಿಗದಿ ಮಾಡಬೇಕಿದೆ ಎಂದರು.

ಕಾಂಗ್ರೆಸ್ ಸೇರ್ಪಡೆಯ ಬಳಿಕ ಮಾತನಾಡಿದ ಎಸ್ ನಾರಾಯಣ್ ರಾಜಕೀಯ ಪ್ರವೇಶ ಎಂದಾಗ ನಾನು ಆಯ್ಕೆ‌ಮಾಡಿಕೊಂಡಿದ್ದು ಕಾಂಗ್ರೆಸ್ ಪಕ್ಷ. ದೇಶಕ್ಕಾಗಿ ಕಾಂಗ್ರೆಸ್ ತ್ಯಾಗ ಬಲಿದಾನ ಎಲ್ಲವನ್ನೂ ಕೊಟ್ಟಿದೆ. ಬಡವ, ದಲಿತ, ಹಿಂದುಳಿದವರ ಧ್ವನಿ ಈ ಕಾಂಗ್ರೆಸ್. ಪಕ್ಷದ ಜಾತ್ಯಾತೀತ ಸಿದ್ದಾಂತಗಳು ಇಷ್ಟ ಆಯ್ತು. ಹಾಗಾಗಿ ನಾನು ಕಾಂಗ್ರೆಸ್ ಸೇರಿದೆ. ನಮ್ಮೆಲ್ಲರ ಗುರಿ 2023ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಪಕ್ಷಕ್ಕಾಗಿ ದುಡಿಯುತ್ತೇನೆ. ಕೊಟ್ಟ ಮಾತಿನಂತೆ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಎಸ್ ನಾರಾಯಣ್ ಕಾಂಗ್ರೆಸ್ ಪಕ್ಷ ಸೇರ್ಪಡೆಯ ಸಂದರ್ಭದಲ್ಲಿ ರಾಜ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಮ್ಮಯ್ಯ ಪುರ್ಲೆ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Spread the love

Related Articles

Leave a Reply

Your email address will not be published. Required fields are marked *

Back to top button