Breaking NewsLatestಉತ್ತರ ಕನ್ನಡಸುದ್ದಿ

ಕಾರವಾರ : ಪತ್ನಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಯುವಕ

ಕಾರವಾರ : ಸಾಲ ಮಾಡಿಕೊಂಡಿದ್ದನ್ನೇ ಮನಸ್ಸಿಗೆ ಹಚ್ಚಿಕೊಂಡು ವಿವಾಹಿತನೋರ್ವ ಪತ್ನಿಗೆ ಕರೆ ಮಾಡಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆದಿದೆ. ಮಹದ್ ಶಫೀಕ್ (34) ಆತ್ಮಹತ್ಯೆ ಮಾಡಿಕೊಂಡವನಾಗಿದ್ದು,ಕಾರವಾರ ಚಿತ್ತಾಕುಲಾ ನಾಕುದಾಮೊಹಲ್ಲಾದ ಈತ ತನ್ನ ಪತ್ನಿ ಸಮೀರಾಳಿಗೆ ಕರೆ ಮಾಡಿ ಮನೆಯ ಪಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದ ಈತ ಮದ್ಯ ವ್ಯಸನಿಯಾಗಿದ್ದ‌ ಎಂದು ತಿಳಿದು ಬಂದಿದೆ.ಹಲವು ಕಡೆ ಸಾಲ ಮಾಡಿಕೊಂಡಿದ್ದ ಈತ ಅದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಘಟನೆ ಸಂಬಂಧ ಚಿತ್ತಾಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Spread the love

Related Articles

Leave a Reply

Your email address will not be published. Required fields are marked *

Back to top button