Breaking NewsLatest
ವಿಪಕ್ಷಗಳ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರ

ಬೆಳಗಾವಿ: ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೂ ಧ್ವನಿ ಮತದ ಮೂಲಕ ವಿಧಾನಸಭೆಯಲ್ಲಿ ಮಹತ್ವದ ಮತಾಂತರ ನಿಷೇಧ ಕಾಯ್ದೆ ಅಂಗೀಕಾರವಾಗಿದೆ.
ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನಸಭೆಯಲ್ಲಿ ಆಡಳಿತರೂಢ ಬಿಜೆಪಿ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ಮಾಡಿತ್ತು. ಈ ವಿಧೇಯಕಕ್ಕೆ ವಿಪಕ್ಷಗಳು ವಿರೋಧ ವ್ಯಕ್ತಪಡಿಸಿದ್ದವು.
ಮತಾಂತರ ನಿಷೇಧ ವಿಧೇಯಕದ ಮೇಲೆ ವಿಧಾನಸಭೆ ಕಲಾಪದಲ್ಲಿ ಸಾಕಷ್ಟು ಚರ್ಚೆಯಾಯಿತು. ಈ ಮಧ್ಯೆ ಕಾಂಗ್ರೆಸ್ ಜೆಡಿಎಸ್ ಸದಸ್ಯರು ಈ ವಿಧೇಯಕವನ್ನ ವಿರೋಧಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಈ ನಡುವೆ ಇದೀಗ ವಿಪಕ್ಷಗಳ ಗದ್ಧಲ ಕೋಲಾಹಲದ ನಡುವೆ ಮತಾಂತರ ನಿಷೇಧ ವಿಧೇಯಕವನ್ನ ಅಂಗೀಕಾರ ಮಾಡಲಾಗಿದೆ. ಬಳಿಕ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪ 10 ನಿಮಿಷ ಮುಂದೂಡಿದರು.
