Breaking NewsLatestರಾಜಕೀಯರಾಜ್ಯಸುದ್ದಿ

ಕರ್ನಾಟಕ ವಿಧಾನಸಭೆ ಚುನಾವಣೆ: ಯುವ ನಾಯಕರನ್ನ ಪಕ್ಷಕ್ಕೆ ಸೆಳೆಯುವ ಕಾರ್ಯಕ್ರಮನಡೆಸುತ್ತಿರುವ ಬಿಜೆಪಿ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ಬಿಜೆಪಿ ಭರ್ಜರಿ ತಯಾರಿ ನಡೆಸಿದ್ದು, ಯುವ ನಾಯಕರನ್ನ ಪಕ್ಷಕ್ಕೆ ಸೆಳೆಯುವ ಕಾರ್ಯಕ್ರಮ ಹಮ್ಮಿಕೊಂಡಿದೆ. ಈ ಬಾರಿ ಶತಾಯಗತಾಯವಾಗಿ ಅಧಿಕಾರಕ್ಕೇರಬೇಕೆಂದು ಇನ್ನಿಲ್ಲದ ಕಸರತ್ತು ನಡೆಸಿದೆ.

ಇದುವರೆಗೂ ಕರ್ನಾಟಕದಲ್ಲಿ ಬಿಜೆಪಿ ಒಂದು ಬಾರಿಯೂ ಬಹುಮತ ಗಳಿಸಲಿಲ್ಲ, 2008 ರಲ್ಲಿ 108 ಮತ್ತು 2018 ರಲ್ಲಿ 104 ಸ್ಥಾನಗಳನ್ನು ಪಡೆದುಕೊಂಡಿದೆ , ಬಿಜೆಪಿಗೆ 113 ರ ಮ್ಯಾಜಿಕ್ ಸಂಖ್ಯೆಯನ್ನು ಪಡೆಯಲು ಸಾಧ್ಯವಾಗುತ್ತಿಲ್ಲ, ಕಾರಣವೆಂದರೆ ಹಳೆಯ ಮೈಸೂರಿನಲ್ಲಿ ಬಿಜೆಪಿ ವೀಕ್ ಆಗಿದೆ. ಒಕ್ಕಲಿಗರ ಹೃದಯಭಾಗದಲ್ಲಿ ಪಕ್ಷಕ್ಕೆ ಬೆಂಬಲ ಬೇಕು ಎಂಬುದನ್ನು ಮನಗಂಡಿರುವ ಪಕ್ಷ, ತನ್ನ ಹೆಜ್ಜೆಗುರುತು ವಿಸ್ತರಿಸಲು ಹವಣಿಸುತ್ತಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್‌ ಪ್ರಭಾವಿ ಕ್ಷೇತ್ರಗಳಲ್ಲಿ ಬಿಜೆಪಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಕೇಂದ್ರ ನಾಯಕತ್ವದೊಂದಿಗೂ ಚರ್ಚಿಸಿದೆ. ರಾಜ್ಯದ ಎಲ್ಲಾ ಭಾಗದಿಂದಲೂ ಬಹಳ ಜನ ಬಿಜೆಪಿಗೆ ಬರುತ್ತಿದ್ದಾರೆ. ವಿಶೇಷವಾಗಿ ಕೋಲಾರ, ಮಂಡ್ಯದಿಂದ ಹೆಚ್ವು ಜನ ಬರುತ್ತಿದ್ದಾರೆ. ಹಂತಹಂತವಾಗಿ ಸೇರ್ಪಡೆ ಮಾಡುವ ಕೆಲಸವಾಗುತ್ತಿದೆ. ಬಹಳ ದೊಡ್ಡ ಪ್ರಮಾಣದಲ್ಲಿ ದಕ್ಷಿಣ ಕರ್ನಾಟಕದಲ್ಲಿ ಸಾರ್ವಜನಿಕರು ಹಾಗೂ ವಿಶೇಷವಾಗಿ ಯುವಕರು ಪಕ್ಷಕ್ಕೆ ಬರಲು ಒಲವು ತೋರುತ್ತಿದ್ದಾರೆ” ಎಂದರು.

“ಮಂಡ್ಯ ಜಿಲ್ಲೆಯಲ್ಲಿ ಹೊಸ ಯುವ ನಾಯಕತ್ವ ಹೊರಹೊಮ್ಮುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಬಿಜೆಪಿಯ ಪರವಾಗಿ ಮಂಡ್ಯದಲ್ಲಿ ಬಹಳ ದೊಡ್ಡ ಶಕ್ತಿಯ ಅಲೆ ಕಾಣುತ್ತಿದೆ” ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Spread the love

Related Articles

Leave a Reply

Your email address will not be published. Required fields are marked *

Back to top button