Breaking NewsLatestಬಾಲಿವುಡ್ಮನರಂಜನೆರಾಜಕೀಯರಾಜ್ಯರಾಷ್ಟ್ರೀಯಸಿನಿಮಾಸುದ್ದಿಸೆಲೆಬ್ರಿಟಿಸ್ಯಾಂಡಲ್ ವುಡ್

ಬೊಮ್ಮಾಯಿ ಮೆಚ್ಚಿಕೊಂಡ ‘ದ ಕಾಶ್ಮೀರ್ ಫೈಲ್ಸ್’: ರಾಜ್ಯದಲ್ಲಿ ತೆರಿಗೆ ವಿನಾಯಿತಿ

ಇತ್ತೀಚೆಗೆ ರಿಲೀಸ್ ಆದ ದ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿದೆ. ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರ ವಿರುದ್ಧ ನಡೆದ ಭಯೋತ್ಪಾದನೆ, ದೌರ್ಜನ್ಯಗಳ ಕರಾಳ ಮುಖವನ್ನ ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಬಿಚ್ಚಿಡಲಾಗಿದ್ದು ಈಗಾಗ್ಲೆ ಚಿತ್ರವನ್ನ ಪ್ರಧಾನಿ ನರೇಂದ್ರ ಮೆಚ್ಚಿಕೊಂಡಿದ್ದಾರೆ. ಇದೀಗ ಸಿಎಂ ಬಸವರಾಜ್ ಬೊಮ್ಮಾಯಿ ಕೂಡ ಚಿತ್ರ ವೀಕ್ಷಿಸಿದ್ದು ಸಿನಿಮಾದ ಬಗ್ಗೆ ಮೆಚ್ಚುಗೆಯ ಮಾತನಾಡಿದ್ದಾರೆ.

ಕಾಶ್ಮೀರಿ ಪಂಡಿತರು ತಮ್ಮ ನೆಲದಿಂದ ವಲಸೆ ಹೋಗುವಂತೆ ಮಾಡಿದ ಪರಿಸ್ಥಿತಿಯ ಕುರಿತು ನೇರವಾದ ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮಾಡಿರುವ ವಿವೇಕ್ ಅಗ್ನಿಹೋತ್ರಿಗೆ ವಂದನೆಗಳು. ಈ ಸಿನಿಮಾಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ದ ಕಾಶ್ಮೀರ್ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ದ ಕಾಶ್ಮೀರ್ ಫೈಲ್ಸ್ ಸತ್ಯ ಘಟನೆಯಾಧಾರಿತ ಸಿನಿಮಾವಾಗಿದ್ದು ಜಮ್ಮ ಕಾಶ್ಮೀರದಲ್ಲಿ ಕಾಶ್ಮೀರಿ ಹಿಂದೂಗಳ ಹತ್ಯೆ ಹಾಗೂ ಅವರ ವಲಸೆ ಕುರಿತಾಗಿ ಚಿತ್ರೀಕರಿಸಲಾಗಿದೆ. ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ಈ ಸಿನಿಮಾದಲ್ಲಿ ಅನುಪಮ್ ಖೇರ್, ಮಿಥು್ ಚಕ್ರವರ್ತಿ, ಪಲ್ಲವಿ ಜೋಶೀ, ದರ್ಶನ್ ಕುಮಾರ್ ಸೇರಿದಂತೆ ಸಾಕಷ್ಟು ಮಂದಿ ಬಣ್ಣ ಹಚ್ಚಿದ್ದಾರೆ. ಮಾ.11ರಂದು ಬಿಡುಗಡೆಯಾದ ಸಿನಿಮಾ ಮೊದಲ ದಿನವೇ 3.55 ಕೋಟಿ ಕಲೆಕ್ಷನ್ ಮಾಡಿತ್ತು.

Spread the love

Related Articles

Leave a Reply

Your email address will not be published. Required fields are marked *

Back to top button