Breaking NewsLatestಮೆಟ್ರೋರಾಜಕೀಯರಾಜ್ಯಸುದ್ದಿ

ನಿಷೇಧಿತ ಆನ್ ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯದಲ್ಲಿ ನಿಷೇಧಿಸಲಾಗಿದ್ದ ಆನ್ ಲೈನ್ ಗೇಮಿಂಗ್ ಗೆ ಹೈಕೋರ್ಟ್ ಸೋಮವಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ರಾಜ್ಯದಲ್ಲಿ ಆನ್ ಲೈನ್ ಗೇಮಿಂಗ್ ನ್ನು ರಾಜ್ಯ ಸರ್ಕಾರ  ನಿಷೇಧಿಸಿತ್ತು. ಇದನ್ನು ಪ್ರಶ್ನಿಸಿ ಆನ್ ಲೈನ್ ಗೇಮಿಂಗ್ ಸಂಸ್ಥೆಗಳು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದವು. ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಆನ್ ಲೈನ್ ಗೇಮ್ ಗೆ ಗ್ರೀನ್ ಸಿಗ್ನಲ್ ನೀಡಿದೆ.

ಸರ್ಕಾರದ ಕ್ರಮ ಕಾನೂನು ಬಾಹಿರ

ಆನ್ ಲೈನ್ ಗೇಮಿಂಗ್ ನಿಷೇಧಿಸಿದ್ದ ಸರ್ಕಾರದ ಆದೇಶವನ್ನು ರದ್ದುಪಡಿಸಿದ ಹೈಕೋರ್ಟ್, ಸರ್ಕಾರದ ಕ್ರಮ ಸಂವಿಧಾನ ಬದ್ಧವಾಗಿಲ್ಲ. ಅದು ಕಾನೂನು ಬಾಹಿರ ಎಂದಿದೆ. ಸಂವಿಧಾನ ಬದ್ಧ ಶಾಸನ ರೂಪಿಸಲು ಸರ್ಕಾರ ಬದ್ಧವಾಗಿದೆ. ಆದರೆ ಅದಕ್ಕೂ ಮುನ್ನ ಆನ್ ಲೈನ್ ಗೇಮೀಂಗ್ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.

Spread the love

Related Articles

Leave a Reply

Your email address will not be published. Required fields are marked *

Back to top button