‘ದ ಕಾಶ್ಮೀರ್ ಫೈಲ್ಸ್’ ಸಿನಿಮಾ ನೋಡಲ್ಲ ಎಂದ ಸಿದ್ದರಾಮಯ್ಯ

ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಸದ್ಯ ದೇಶದೆಲ್ಲೆಡೆ ದೊಡ್ಡ ಸದ್ದು ಮಾಡ್ತಿದೆ. ಈಗಾಗ್ಲೆ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಸಿಎಂ ಬಸವರಾಜ್ ಬೊಮ್ಮಾಯಿ ಅವರುಗಳಿಂದ ಮೆಚ್ಚುಗೆ ಪಡೆದುಕೊಂಡಿದೆ. ಪ್ರತಿಯೊಬ್ಬರು ನೋಡಿ ಮೆಚ್ಚುಗೆ ಸೂಚಿಸುತ್ತಿರುವ ದಿ ಕಾಶ್ಮೀರ್ ಫೈಲ್ಸ್ ಚಿತ್ರವನ್ನ ಮಾಜಿ ಸಿಎಂ ಸಿದ್ದರಾಮಯ್ಯ ವೀಕ್ಷಿಸೋದಿಲ್ಲ ಎಂದಿದ್ದಾರೆ.
ಈಗಾಗ್ಲೆ ಕರ್ನಾಟಕದಲ್ಲಿ ದಿ ಕಾಶ್ಮೀರ್ ಫೈಲ್ಸ್ ಚಿತ್ರಕ್ಕೆ ತೆರಿಗೆ ರಹಿತ ಮಾಡೋದಾಗಿ ಬೊಮ್ಮಾಯಿ ತಿಳಿಸಿದ್ದಾರೆ. ನಿನ್ನೆ ಸದನದಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸಚಿವರು, ಶಾಸಕರಿಗೆ ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.
ಇಂದು (ಮಾ.15) ಸಂಜೆ 6.45ಕ್ಕೆ ಬೆಂಗಳೂರಿನ ಮಂತ್ರಿ ಮಾಲ್ ನಲ್ಲಿ ಸಚಿವರು, ಶಾಸಕರು ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ನೋಡಲಿದ್ದಾರೆ. ವಿಧಾನಸಭೆ ಸಚಿವಾಲಯದಿಂದ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಸ್ಪೀಕರ್ ಕಾಗೇರಿ ಕರೆದಿದ್ದಾರೆ. ಹೋಗುವವರು ಹೋಗಲಿ ಎಂದಿದ್ದಾರೆ. ಆದ್ರೆ ನಾನು ಸಿನಿಮಾ ನೋಡುವುದು ಕಡಿಮೆ ಹಾಗಾಗಿ ಹೋಗುವುದಿಲ್ಲ ಎಂದಿದ್ದಾರೆ.
ಇನ್ನೂ ಚಿತ್ರವನ್ನ ಮಾಜಿ ಸಿಎಂ ಯಡಿಯೂರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ ವೀಕ್ಷಿಸಿದ್ದಾರೆ. ಜೊತೆಗೆ ದಿ ಕಾಶ್ಮೀರ್ ಫೈಲ್ಸ್ ಚಿತ್ರದ ಉಚಿತ ವೀಕ್ಷಣೆಗೆ ವಿಜಯಪರ ಶಾಸಕ ಬಸವನಗೌಡ ಯತ್ನಾಳ್ ವ್ಯವಸ್ಥೆ ಮಾಡಿದ್ದಾರೆ. ಮಾರ್ಚ್ 21ರಂದು ಜಿಲ್ಲೆಯಲ್ಲಿ ದಿ ಕಾಶ್ಮೀರ ಫೈಲ್ಸ್ ಸಿನಿಮಾ ಬಿಡುಗಡೆ ಆಗಲಿದ್ದು ಅಪ್ಸರಾ ಚಿತ್ರಮಂದಿರದಲ್ಲಿ ಉಚಿತ ವೀಕ್ಷಣಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಮಧ್ಯಪ್ರದೇಶದಲ್ಲಿ ಈಗಾಗ್ಲೆ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಇದೀಗ ಅಲ್ಲಿನ ಪೊಲೀಸರಿಗೆ ಚಿತ್ರ ವೀಕ್ಷಿಸುವ ಸಲುವಾಗಿ ರಘೆ ನೀಡುವುದಾಗಿ ಗೃಹ ಸಚಿವ ನರೋತ್ತಮ್ ಮಿಶ್ರಾ ತಿಳಿಸಿದ್ದಾರೆ.
