Breaking NewsLatestಮೆಟ್ರೋರಾಜ್ಯಸುದ್ದಿ
ಕರ್ನಾಟಕದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಮಹಾರಾಷ್ಟ್ರದ ಮಧ್ಯ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಗದಗ, ಬೆಳಗಾವಿ, ಬಾಗಲಕೋಟೆ, ಹಾವೇರಿಯಲ್ಲಿ ಮಾರ್ಚ್ 28ರವರೆಗೆ ಮಳೆಯಾಗಲಿದೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ವರುಣ ಜನರಿಗೆ ತಂಪೆರೆಯಲಿದ್ದಾನೆ. ಈಗಾಗಲೇ ಬಹುತೇಕ ಜಿಲ್ಲೆಗಳಲ್ಲಿ ಪ್ರತಿನಿತ್ಯ ಜಿಟಿ ಜಿಟಿ ಮಳೆಯಾಗಿದೆ. ಇಂದಿನಿಂದ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗಲಿದೆ.
