Breaking NewsLatestರಾಜ್ಯ

ಅಕ್ಟೋಬರ್ ಅಂತ್ಯದವರೆಗೆ ಕೇರಳಕ್ಕೆ ಸಂಚಾರ ನಿರ್ಬಂಧ

ಬೆಂಗಳೂರು: ಕೋವಿಡ್ ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ, ಹಾಗೂ ಕೇರಳದಲ್ಲಿ ನಿಫಾ ವೈರಸ್ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಎಲ್ಲಡೆ ಕಟ್ಟೆಚ್ಚರ ವಹಿಸಬೇಕಾಗಿದ್ದು, ಹೆಚ್ಚಿನ ನಿಬಂಧನೆಗಳನ್ನು ಪಾಲಿಸುವಂತೆ ರಾಜ್ಯ ಸರ್ಕಾರ ಸೂಚಿಸಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಹೆಚ್ಚಾದ ಹಿನ್ನೆಲೆಯಲ್ಲಿ ಹೊಸ ಮಾರ್ಗಸೂಚಿ ಹೊರಡಿಸಲಾಗಿದೆ.

ಶಿಕ್ಷಣ ಸಂಸ್ಥೆಗಳಿಗೆ ಸಂಚರಿಸುವ ವಿದ್ಯಾರ್ಥಿಗಳು, ಆಸ್ಪತ್ರೆ, ನರ್ಸಿಂಗ್ ಹೋಂ ಸಿಬ್ಬಂದಿಗಳು, ಕಾರ್ಖಾನೆ, ಹೋಟೆಲ್ ಸಹಿತ ಎಲ್ಲಾ ಉದ್ಯೋಗ, ವಹಿವಾಟು ಕೇಂದ್ರಗಳಿಗೆ ಸಂಚರಿಸುವ ಜನರು ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣವನ್ನು ಮುಂದೂಡಬೇಕು. ಸಂಬಂಧಿಸಿದ ಸಂಸ್ಥೆಗಳ ಮುಖ್ಯಸ್ಥರು ಇದರ ಜವಾಬ್ದಾರಿ ತೆಗೆದುಕೊಂಡು, ತುರ್ತು ಅಗತ್ಯವಿಲ್ಲದ ಕೇರಳ ಪ್ರಯಾಣವನ್ನು ಮುಂದೂಡಬೇಕು ಎಂದು ಸರ್ಕಾರ ಸಲಹೆ ನೀಡಿದೆ.

Spread the love

Related Articles

Leave a Reply

Your email address will not be published. Required fields are marked *

Back to top button