Breaking NewsLatestಜಿಲ್ಲಾ ಸುದ್ದಿಮೆಟ್ರೋರಾಜ್ಯಸುದ್ದಿ
ಕೆಎಎಸ್ ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಒಟ್ಟು 5 ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ವಶ ಪಡಿಸಿಕೊಂಡಿದ್ದಾರೆ.
ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ಪ್ರಧಾನ ವ್ಯವಸ್ಥಾಪಕಾರಾಗಿ ರಂಗನಾಥ್ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಬೆಂಗಳೂರಿನ ಉತ್ತರ ತಾಲೂಕು ಉಪನೊಂದಣಾಧಿಕಾರಿಯಾಗಿ ಕೆಲಸ ಮಾಡಿದ್ದಾರೆ.ಈ ವೇಳೆ ಗೋಮಾಳ ಜಮೀನನ್ನು ನಿಯಮ ಬಾಹಿರವಾಗಿ ಖಾಸಗಿ ಯವರಿಗೆ ಪರಭಾರೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಎಸಿಬಿ ಕೋರ್ಟ್ ಸೂಚನೆ ಮೇರೆಗೆ ಎಫ್‍ಐಆರ್ ದಾಖಲಿಸಿತ್ತು.
ನ್ಯಾಯಾಂಗ ಬಡಾವಣೆಯಲ್ಲಿರುವ ವಾಸದ ಮನೆ, ನಾಗರಬಾವಿಯಲ್ಲಿರುವ ಸಂಬಂಧಿಕರ ಮನೆ, ದೊಡ್ಡ ಬಳ್ಳಾಪುರದಲ್ಲಿರುವ ಕಲ್ಯಾಣ ಮಂಟಪ ಮತ್ತು ಟೌನ್ ಕನಕ ಶ್ರೀ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಸ್ಕೂಲ್, ಉತ್ತರ ತಾಲೂಕು ವಿಭಾಗದ ಕಚೇರಿ, ಮೇಲೆ ದಾಳಿ ಮಾಡಲಾಗಿದೆ. 42 ಎಸಿಬಿ ಅಧಿಕಾರಿಗಳು 5 ತಂಡಗಳಾಗಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.
