Breaking NewsLatestಮನರಂಜನೆಸಿನಿಮಾಸ್ಯಾಂಡಲ್ ವುಡ್

ಏಪ್ರಿಲ್ 10 ರಿಂದ ಕೆಜಿಎಫ್-2 ಬುಕ್ಕಿಂಗ್ ಓಪನ್

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ಕೆಜಿಎಫ್ 2 ಸಿನಿಮಾದ ಹವಾ ದಿನದಿಂದ ದಿನಕ್ಕೆ ಜಾಸ್ತಿಯಾಗ್ತಿದೆ. ಸಾಕಷ್ಟು ನಿರೀಕ್ಷೆ ಮೂಡಿಸಿರುವ ಸಿನಿಮಾ ಏಪ್ರಿಲ್ 14ರಂದು ವಿಶ್ವದಾದ್ಯಂತೆ ತೆರೆಗೆ ಬರ್ತಿದೆ. ಚಿತ್ರ ನೋಡೋಕೆ ಅಭಿಮಾನಿಗಳು ಕಾದು ಕೂತಿದ್ದು ದಿನಗಳನ್ನ ಲೆಕ್ಕ ಹಾಕ್ತಿದ್ದಾರೆ.

ಕೆಜಿಎಫ್ 2 ಸಿನಿಮಾ ಬಿಡುಗಡೆಗೆ ಇನ್ನು ಏಳು ದಿನ ಮಾತ್ರವೇ ಬಾಕಿ ಇದೆ. ಹೀಗಾಗಿ ಈಗಾಗಲೇ ಕೆಲವು ರಾಜ್ಯಗಳಲ್ಲಿ ಚಿತ್ರದ ಟಿಕೇಟ್ ಬುಕ್ಕಿಂಗ್ ಓಪನ್ ಆಗಿದೆ.

ಕೇರಳ, ತಮಿಳುನಾಡಿನಲ್ಲಿ ಇಂದಿನಿಂದಲೇ ಟಿಕೇಟ್ ಬುಕ್ಕಿಂಗ್ ಓಪನ್ ಆಗಿದೆ. ಜೊತೆಗೆ ಅಮೇರಿಕ ಸೇರಿದಂತೆ ಇನ್ನೂ ಕೆಲವು ದೇಶಗಳಲ್ಲಿ ನಾಳೆಯಿಂದ ಟಿಕೇಟ್ ಬುಕ್ಕಿಂಗ್ ಓಪನ್ ಆಗಲಿದೆ. ಆದರೆ ಕರ್ನಾಟಕದಲ್ಲಿ ಯಾವಾಗ ಟಿಕೇಟ್ ಬುಕ್ಕಿಂಗ್ ಓಪನ್ ಆಗುತ್ತೆ ಅನ್ನೋದರ ಕುರಿತು ಸರಿಯಾದ ಮಾಹಿತಿ ಇರಲಿಲ್ಲ. ಇದೀಗ ಚಿತ್ರತಂಡ ಕರ್ನಾಟಕದಲ್ಲಿ ಟಿಕೇಟ್ ಬುಕ್ಕಿಂಗ್ ಕುರಿತು ಮಾಹಿತಿ ನೀಡಿದೆ.

ಕರ್ನಾಟಕದಲ್ಲಿ ‘ಕೆಜಿಎಫ್ 2’ ಸಿನಿಮಾದ ಟಿಕೆಟ್ ಬುಕಿಂಗ್ ಏಪ್ರಿಲ್ 10 ರಂದು ಪ್ರಾರಂಭಗೊಳ್ಳಲಿದೆ. ಸಿನಿಮಾ ಬಿಡುಗಡೆಗೆ ಮೂರು ದಿನ ಮುಂಚಿತವಾಗಿ ಕರ್ನಾಟಕದಲ್ಲಿ ಬುಕ್ ಮೈ ಶೋ, ಪೇಟಿಎಂ ಬಳಸಿ ಟಿಕೆಟ್ ಬುಕಿಂಗ್ ಮಾಡಿಕೊಳ್ಳಬಹುದಾಗಿದೆ ಎಂದು ಚಿತ್ರತಂಡ ತಿಳಿಸಿದೆ.

ಪ್ರಶಾಂತ್ ನೀಲ್ ನಿರ್ದೇಶನದ, ಹೊಂಬಾಳೆ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ‘ಕೆಜಿಎಫ್ 2’ ಸಿನಿಮಾ ವಿಶ್ವದಾದ್ಯಂತ ಸುಮಾರು 6000 ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button