Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್

ಪ್ರಚಾರ ಆರಂಭಿಸಿದ ಕೆಜಿಎಫ್ ಚಾಪ್ಟರ್ 2

ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಕೆಜಿಎಫ್ ಚಾಪ್ಟರ್ 2’ ಬಿಡುಗಡೆಗಾಗಿ ಅಭಿಮಾನಿಗಳು ಕಾದು ಕೂತಿದ್ದಾರೆ. 2018ರ ಡಿಸೆಂಬರ್‌ನಲ್ಲಿ ಕೆಜಿಎಫ್ ಪಾರ್ಟ್ 1 ರಿಲೀಸ್ ಆಗಿದ್ದು, ಇದೀಗ ಏಪ್ರಿಲ್ 14ರಂದು ಪಾರ್ಟ್ 2 ರಿಲೀಸ್​ಗೆ ವೇದಿಕೆ ಸಿದ್ದವಾಗಿದೆ. ಇಡೀ ವಿಶ್ವವನ್ನೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ್ದು ಯಶ್ ನಟನೆಯ ಕೆಜಿಎಫ್​ ಸಿನಿಮಾ. ಇದೀಗ ಈ ಚಿತ್ರವನ್ನ ಪ್ಯಾನ್‌ವರ್ಲ್ಡ್ ಆಗಿಸಬೇಕೆಂದು ಚಿತ್ರತಂಡ ತಯಾರಿ ನಡೆಸಿದ್ದು, ಇದೀಗ ಕೆಜಿಎಫ್ 2 ಚಿತ್ರದ ಟ್ರೇಲರ್ ಬಿಡುಗಡೆಗೆ ಡೇಟ್ ಅನೌನ್ಸ್ ಮಾಡಿದೆ.

‘ಕೆಜಿಎಫ್ ಚಾಪ್ಟರ್ 2’ ಚಿತ್ರದ ಟ್ರೇಲರ್ ಮಾರ್ಚ್ 27ರಂದು ಸಂಜೆ 6.40ಕ್ಕೆ ರಿಲೀಸ್ ಆಗಲಿದೆ. ಈ ಹಿಂದೆ ಯಶ್​ ಹುಟ್ಟುಹಬ್ಬಕ್ಕೆ ‘ಕೆಜಿಎಫ್ 2’ ಚಿತ್ರದ ಹೊಸ ಪೋಸ್ಟರ್​ವೊಂದು ರಿಲೀಸ್​ ಆಗಿತ್ತು. ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ 2 ಚಿತ್ರದಲ್ಲಿ ಘಟಾನುಘಟಿ ಕಲಾವಿಧರು ಬಣ್ಣ ಹಚ್ಚಿದ್ದು ಚಿತ್ರ ಏಪ್ರಿಲ್ 14ರಂದು ವಿಶ್ವದಾದ್ಯಾಂತ ಏಕಕಾಲದಲ್ಲಿ ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ತೆರೆಗೆ ಬರಲಿದೆ.

Spread the love

Related Articles

Leave a Reply

Your email address will not be published. Required fields are marked *

Back to top button