Breaking NewsLatestಮನರಂಜನೆಸಿನಿಮಾ
ಕೆಜಿಎಫ್ 2 ಟ್ರೈಲರ್ ರಿಲೀಸ್: ಅಭಿಮಾನಿಗಳಲ್ಲಿ ಶುರುವಾಗಿದೆ ಕಾತುರ

ಸ್ಯಾಂಡಲ್ ವುಡ್ ನಲ್ಲಿ ಭಾರಿ ಸಂಚಲನ ಮೂಡಿಸಿದ್ದ ಸಿನಿಮಾ ಕೆಜಿಎಫ್ -2 ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಚಿತ್ರತಂಡ ಪ್ರಚಾರ ಕಾರ್ಯಗಳಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಚಿತ್ರದ ಪೋಸ್ಟರ್ ಮತ್ತು ಟೀಸರ್ ನಿಂದಲೇ ಕೆಜಿಎಫ್ 2 ಬಹಳ ಸದ್ದು ಮಾಡುತ್ತಿದೆ. ಹೀಗಾಗಿ ಯಶ್ ಅಭಿಮಾನಿಗಳು ಸೇರಿದಂತೆ ಕನ್ನಡ ಸಿನಿ ಪ್ರಿಯರು ಸಿನಿಮಾ ನೋಡುವುದಕ್ಕಾಗಿ ಕಾದು ಕುಳಿತಿದ್ದಾರೆ. ಈಗ ಚಿತ್ರದ ಟ್ರೈಲರ್ ರಿಲೀಸ್ ಗೆ ಅಭಿಮಾನಿಗಳಿಂದ ಭಾರಿ ಸಿದ್ಧತೆ ನಡೆದಿದೆ. ಟ್ರೈಲರ್ ಮೂಲಕವೇ ಸಿನಿಮಾ ಹೇಗಿರಲಿದೆ ಎಂಬ ಝಲಕ್ ಸಿಗಲಿದೆ.
ಬೆಂಗಳೂರಿನಲ್ಲಿ ನಡೆಯುವ ಟ್ರೈಲರ್ ರಿಲೀಸ್ ಕಾರ್ಯಕ್ರಮವನ್ನು ಬಾಲಿವುಡ್ ನಿರೂಪಕ ಕರಣ್ ಜೋಹರ್ ನಡೆಸಿಕೊಳ್ಳಲಿದ್ದಾರೆ. ಈಗಾಗಲೇ ಈ ಚಿತ್ರದ ಮೇಲೆ ಸಿನಿಪ್ರಿಯರು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇತ್ತೀಚೆಗೆ ರಿಲೀಸ್ ಆದ ಸಿನಿಮಾದ ‘ತೂಫಾನ್..’ ಹಾಡು ಅಭಿಮಾನಿಗಳಿಗೆ ಥ್ರಿಲ್ ನೀಡಿದೆ
