Breaking NewsLatestಮನರಂಜನೆಸಿನಿಮಾಸೆಲೆಬ್ರಿಟಿಸ್ಯಾಂಡಲ್ ವುಡ್
ಮಂತ್ರಾಲಯಕ್ಕೆ ಭೇಟಿ ನೀಡಿದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್

ಸ್ಯಾಂಡಲ್ವುಡ್ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಶ್ರೀ ಗುರು ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆದುಕೊಂಡಿದ್ದಾರೆ. ಮಂತ್ರಾಲಯದಲ್ಲಿ ಗುರುವೈಭವೋತ್ಸವ ಕಾರ್ಯಕ್ರಮ ನಡೆಯುತ್ತಿರುವ ಹಿನ್ನೆಲೆ ದೇವಸ್ಥಾನಕ್ಕೆ ಭೇಟಿ ನೀಡಿರುವ ಕಿಚ್ಚ ಸುದೀಪ್ ರಾಯರ ಬೃಂದಾವನ ದರ್ಶನ ಪಡೆದುಕೊಂಡಿದ್ದಾರೆ. ಶುಕ್ರವಾರ ಸಂಜೆ ಮಂತ್ರಾಲಯಕ್ಕೆ ಆಗಮಿಸಿದ ಸುದೀಪ್ ಶ್ರೀಮಠಕ್ಕೆ ಭೇಟಿ ನೀಡಿದರು. ಆರಂಭದಲ್ಲಿ ರಾಯರ ಮೂಲ ಬೃಂದಾವನ ದರ್ಶನ ಪಡೆದುಕೊಂಡ ಸುದೀಪ್ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಭೇಟಿ ಮಾಡಿದರು. ಶ್ರೀಮಠದಲ್ಲಿ ರಾಯರ 401ನೇ ಪಟ್ಟಾಭಿಷೇಕ ಹಾಗೂ 427ನೇ ವರ್ಧಂತಿ ಉತ್ಸವದ ಹಿನ್ನೆಲೆ ಸುದೀಪ್ ಅವರಿಗೆ ಅನುಗ್ರಹ ಪ್ರಶಸ್ತಿ ನೀಡಿ ಗೌರವಿಸಲಾಯಿತು.
