Breaking NewsLatestಕೊಡಗುಜಿಲ್ಲಾ ಸುದ್ದಿ
ಜಮ್ಮು – ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಕೊಡಗಿನ ಯೋಧ ಅಲ್ತಾಫ್ ಅಹ್ಮದ್ ಹುತಾತ್ಮ

ಕೊಡಗು: ಜಮ್ಮು – ಕಾಶ್ಮೀರದಲ್ಲಿ ಹಿಮಪಾತಕ್ಕೆ ಸಿಲುಕಿ ಕೊಡಗಿನ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ ಹುತಾತ್ಮರಾಗಿದ್ದಾರೆ. ಹಿಮಪಾತಕ್ಕೆ ಸಿಲುಕಿ ಕೊಡಗು ಮೂಲದ ಯೋಧ ಹವಾಲ್ದಾರ್ ಅಲ್ತಾಫ್ ಅಹ್ಮದ್ (37) ಜಮ್ಮು- ಕಾಶ್ಮೀರದಲ್ಲಿ ಮೃತಪಟ್ಟಿರುವುದಾಗಿ ಕುಟುಂಬಸ್ಥರು ಹೇಳಿಕೆ ನೀಡಿದ್ದಾರೆ.
ಎಒಸಿ ರೆಜಿಮೆಂಟ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅಲ್ತಾಫ್ ಸಾವನ್ನಪ್ಪಿದ್ದಾರೆ. ಸದ್ಯ ಯೋಧನ ಕುಟುಂಬ ಕೇರಳದ ಮಟ್ಟನೂರು ಜಿಲ್ಲೆಯಲ್ಲಿ ನೆಲೆಸಿದೆ. ವಿರಾಜಪೇಟೆಯ ಮೀನುಪೇಟೆಯಲ್ಲಿ ಹುಟ್ಟಿ ಬೆಳೆದಿದ್ದ ಅಲ್ತಾಫ್ ಕುಟುಂಬ ಕಳೆದ 10 ವರ್ಷಗಳಿಂದ ಕೇರಳಕ್ಕೆ ಶಿಫ್ಟ್ ಆಗಿತ್ತು ಎಂದು ತಿಳಿದುಬಂದಿದೆ.
ದ್ವಿತೀಯ ಪಿಯುಸಿವರೆಗೂ ವಿರಾಜಪೇಟೆಯಲ್ಲಿ ವಿದ್ಯಾಭ್ಯಾಸ ನಡೆಸಿದ್ದ ಅಲ್ತಾಫ್, ಪಿಯುಸಿ ಬಳಿಕ ಆರ್ಮಿ ಸೇರಿದ್ದರು. ಅಪಾರ ದೇಶಭಕ್ತನಾಗಿದ್ದ ಅಲ್ತಾಫ್, 19 ವರ್ಷಗಳಿಂದ ಸೇನೆಯಲ್ಲಿ ಸೇವೆ ಸಲ್ಲಿಸಿದ್ದರು. ಶ್ರೀನಗರದಲ್ಲಿ ಕರ್ತವ್ಯದಲ್ಲಿದ್ದ ಯೋಧ ಅಲ್ತಾಫ್ ಹುತಾತ್ಮರಾಗಿದ್ದಾರೆ
