Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿ
ಕುಕ್ಕೆ ಸುಬ್ರಮಣ್ಯ, ಧರ್ಮಸ್ಥಳಕ್ಕೆ ಕಾಲಿವುಡ್ ನಟ ವಿಶಾಲ್ ಭೇಟಿ!

ಮಂಗಳೂರು: ಕಾಲಿವುಡ್ ನಟ ವಿಶಾಲ್ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಂತರ ಈಗ ಕುಕ್ಕೆ ಸುಬ್ರಮಣ್ಯ ಸ್ವಾಮಿ ದೇವಸ್ಥಾನಕ್ಕೂ ಭೇಟಿ ಕೊಟ್ಟಿದ್ದಾರೆ.ವಿಶಾಲ್, ಜಾತಕದಲ್ಲಿ ನಾಗದೋಷ ಇರುವ ಹಿನ್ನೆಲೆ ಆಶ್ಲೇಷ ಬಲಿ ಪೂಜೆ ನೆರವೇರಿಸಿದ್ದಾರೆ.
ವಿಶಾಲ್ ದೇವಸ್ಥಾನಕ್ಕೆ ಭೇಟಿ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಶಾಲ್ ನೋಡಿದ ಅಭಿಮಾನಿಗಳು ಸೆಲ್ಫಿಗಾಗಿ ಮುಗಿಬಿದ್ದರು. ಇತ್ತೀಚೆಗಷ್ಟೆ ವಿಶಾಲ್ ಮೈಸೂರಿನ ಶಕ್ತಿಧಾಮಕ್ಕೆ ಭೇಟಿ ನೀಡಿದ್ದರು. ಇದೀಗ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಾಣಿಸಿಕೊಂಡಿದ್ದಾರೆ
