Breaking NewsLatestಜಿಲ್ಲಾ ಸುದ್ದಿರಾಜ್ಯಸುದ್ದಿ
ನ. 19 ರಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ

ಮಂಗಳೂರು: ಧರ್ಮಸ್ಥಳ ಕ್ಷೇತ್ರದಲ್ಲಿ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನ. 19 ರಿಂದ 23ರ ವರೆಗೆ ನಡೆಯಲಿದೆ.
ನ. 22 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ನ. 23ರಂದು ಸಾಹಿತ್ಯ ಸಮ್ಮೇಳನಗಳ 90ನೇ ಅಧಿವೇಶನ ನಡೆಯಲಿದ್ದು, ಈ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನಗಳ ಸ್ವಾಗತ ಸಮಿತಿ ಅಧ್ಯಕ್ಷರಾದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗಡೆ ಆಮಂತ್ರಣ ನೀಡಿದ್ದಾರೆ.
ನವೆಂಬರ್ 19ರಂದು ವಸ್ತು ಪ್ರದರ್ಶನವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ನ. 19 ರಂದು ವಸ್ತು ಪ್ರದರ್ಶನವನ್ನು ಶಾಸಕ ಹರೀಶ್ ಪೂಂಜ ಉದ್ಘಾಟಿಸಲಿದ್ದಾರೆ. ನ. 22ರಂದು ಸಂಜೆ 5 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಯಲಿದ್ದು, ಕೇಂದ್ರ ಸಚಿವೆ ಸ್ಮೃತಿ ಇರಾನಿ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ವಿದ್ವಾಂಸ ಮತ್ತು ನ್ಯಾಯವಾದಿ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ನ. 23ರಂದು ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಚಿತ್ರ ನಿರ್ದೇಶಕ ಪಿ. ಶೇಷಾದ್ರಿ ಉದ್ಘಾಟಿಸಲಿದ್ದಾರೆ.
