Breaking NewsLatestರಾಷ್ಟ್ರೀಯ

ಹಿಮಾಚಲ ಪ್ರದೇಶದಲ್ಲಿ ಭೂಕುಸಿತ; 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ

ಶಿಮ್ಲಾ: ಹಿಮಾಚಲಪ್ರದೇಶದ ಕಿನ್ನೌರ್​ನಲ್ಲಿ ಭೂಕುಸಿತ ಸಂಭವಿಸಿದ್ದು, 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಹಲವಾರು ವಾಹನಗಳು ಮಣ್ಣಿನಡಿ ಸಿಲುಕಿರುವ ಹಿನ್ನೆಲೆಯಲ್ಲಿ ಆತಂಕ ಎದುರಾಗಿದೆ.

ಕನ್ನೌರ್​ನ ರೆಕಾಂಗ್ ಪಿಯೊ-ಶಿಮ್ಲಾ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ ಭೂಕುಸಿತ ಉಂಟಾಗಿದ್ದು, ಒಂದು ಟ್ರಕ್, ರಾಜ್ಯ ಸಾರಿಗೆ ಬಸ್ ಮತ್ತು ಹಲವಾರು ವಾಹನಗಳು ಅವಶೇಷಗಳಡಿ ಸಿಲುಕಿರುವುದಾಗಿ ವರದಿಯಾಗಿದೆ.

ರಕ್ಷಣಾ ಕಾರ್ಯಾಚರಣೆಗಾಗಿ ಇಂಡೋ-ಟಿಬೇಟಿಯನ್ ಗಡಿ ಪೊಲೀಸರನ್ನು ಕಳುಹಿಸಲಾಗಿದೆ.

ಭಾರೀ ಮಳೆಯ ಕಾರಣದಿಂದಾಗಿ ಹಿಮಾಚಲ ಪ್ರದೇಶದ ವಿವಿಧೆಡೆ ಕಳೆದೊಂದು ವಾರದಿಂದ ಭೂಕುಸಿತಗಳಾಗುತ್ತಲೇ ಇವೆ.

Spread the love

Related Articles

Leave a Reply

Your email address will not be published. Required fields are marked *

Back to top button