Breaking Newsಜಿಲ್ಲಾ ಸುದ್ದಿಹುಬ್ಬಳ್ಳಿ - ಧಾರವಾಡ

ಹುಬ್ಬಳ್ಳಿಯಲ್ಲಿ ಅಟೋ – ಲಾರಿ ನಡುವೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು

ಧಾರವಾಡ : ಅಟೋ – ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಅಟೋ ಚಾಲಕ ಸೇರಿ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯ ರಾಷ್ಟ್ರೀಯ ಹೆದ್ದಾರಿ ಸಮೀಪ ಗಬ್ಬೂರು ಕ್ರಾಸ್ ಬಳಿ ನಡೆದಿದೆ.

ಹುಬ್ಬಳ್ಳಿಯಿಂದ ಅಟೋ ಗಬ್ಬೂರ ಕ್ರಾಸ್ ಕಡೆಗೆ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬಂದ್ ಲಾರಿಯು ರಭಸವಾಗಿ ಅಟೋಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಬಸಕ್ಕೆ ಅಟೋ ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸೇರಿ ಪ್ರಯಾಣಿಕನೊಬ್ಬ ಸ್ಥಳದಲ್ಲಿ ಸಾವನಪ್ಪಿದ್ದಾರೆ.

ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಸಂಚಾರಿ ಠಾಣೆ ಪೊಲೀಸರು, ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಬಳಿಕ ಅಪಘಾತದಲ್ಲಿ ಜಖಂಗೊಂಡು ಅಟೋವನ್ನು ಪೊಲೀಸರು ತೆರವು ಮಾಡಿದ್ದಾರೆ. ದಕ್ಷಿಣ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Spread the love

Related Articles

Leave a Reply

Your email address will not be published. Required fields are marked *

Back to top button